12:39 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಫೆ. 24: ವಲ್ಡ್ ಬುಕ್ ಆಫ್ ರೆಕಾರ್ಡ್ಸ್ ಶ್ರೇಷ್ಠತಾ ಪ್ರಮಾಣ ಪತ್ರ ಪುರಸ್ಕೃತ ಡಾ. ರೊನಾಲ್ಡ್ ಕೊಲಾಸೊಗೆ ನಾಗರಿಕ ಸನ್ಮಾನ

22/02/2023, 10:42

ಮಂಗಳೂರು(reporterkarnataka.com): ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಲಂಡನ್ ನಿಂದ ಶ್ರೇಷ್ಠತಾ ಪ್ರಮಾಣ ಪತ್ರ ಪಡೆದಿರುವ ಅನಿವಾಸಿ ಭಾರತೀಯ ಉದ್ಯಮಿ, ದಾನಿ ಡಾ.ರೊನಾಲ್ಡ್ ಕೊಲಾಸೊ ಅವರಿಗೆ ಫೆ. 24 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ.
ಮಾಜಿ ಶಾಸಕ ಜೆ.ಆರ್. ಲೋಬೊ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಡಾ. ಕೊಲಾಸೊ ಅವರ ಸಾಮಾಜಿಕ ಮತ್ತು ಚ್ಯಾರಿಟಿ ಕಾರ್ಯಗಳನ್ನು ಗುರುತಿಸಿ, ಲಂಡನ್‌ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್‌ ಅವರಿಗೆ ಶ್ರೇಷ್ಠತೆ ಪ್ರಮಾಣ ಪತ್ರವ ನೀಡಿತ್ತು. ಅವರ ಈ ಸಾಧನೆಗಾಗಿ ಮಂಗಳೂರಿನ ನಾಗರಿಕರ ಪರವಾಗಿ ಅವರಿಗೆ ನಾಗರಿಕ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಲೋಬೊ ನುಡಿದರು.

ಬೆಂಗಳೂರು ಧರ್ಮಪ್ರಾಂತ್ಯದ ಆರ್ಚ್ ಬಿಷಪ್ ಡಾ. ಪೀಟರ್‌ ಮಚಾದೋ ಹಾಗೂ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದರು.‌

ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್‌ ಪೌಲ್‌ ಸಲ್ದಾನ, ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್.‌ ಯೆನಪೋಯ ವಿವಿ ಚಾನ್ಸಲರ್ ಡಾ. ಅಬ್ದುಲ್ಲ ಕುಂಞಿ, ಉಡುಪಿ ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂ. ಡಾ ಜೆರಾಲ್ಡ್‌ ಐಸಾಕ್‌ ಲೋಬೋ, ಸಿಎಸ್‌ಐ ಕರ್ನಾಟಕ ಧರ್ಮಪ್ರಾಂತ್ಯದ ಬಿಷಪ್ ರೈಟ್.‌ ರೆ. ಹೇಮಚಂದ್ರ ಕುಮಾರ್‌, ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಡಾ ಲಾರೆನ್ಸ್‌ ಮುಕ್ಕುಝಿ, ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ ಫ್ರಾನ್ಸಿಸ್‌ ಸೆರ್ರಾವೋ, ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ ಹೆನ್ರಿ ಡಿʼಸೋಜ, ಶಾಸಕ ಯು.ಟಿ.ಖಾದರ್, ನಿಟ್ಟೆ ಡೀಮ್ಡ್‌ ಟು ಬಿ ವಿವಿ ಚಾನ್ಸಲರ್‌ ಡಾ ಎನ್‌ ವಿನಯ್‌ ಹೆಗ್ಡೆ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ತೇಜಸ್ವಿನಿ ಆಸ್ಪತ್ರೆ ಅಧ್ಯಕ್ಷ ಡಾ.ಶಾಂತಾರಾಮ ಶೆಟ್ಟಿ, ಮಂಗಳೂರಿನ ಬ್ರಹ್ಮಕುಮಾರಿ ಕೇಂದ್ರದ ರಾಜಯೋಗಿನಿ ಬಿ.ಕೆ.ವಿಶ್ವೇಶ್ವರಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ರಾಷ್ಟ್ರೀಯ ಬಿಲ್ಲವರ ಮಹಾಮಂಡಳದ ಅಧ್ಯಕ್ಷ ರಾಜಶೇಖರ್‌ ಕೋಟ್ಯಾನ್‌ ಸಮಾರಂಭದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು