ಇತ್ತೀಚಿನ ಸುದ್ದಿ
ಫೆಂಗಲ್ ಚಂಡಮಾರುತ ಎಫೆಕ್ಟ್: ಮಂಗಳೂರು ಸಹಿತ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ
02/12/2024, 17:56
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ.
ಮಂಗಳೂರು ನಗರದಲ್ಲಿ ಸೋಮವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆಯ ಬಳಿಕ ಭಾರೀ ಮಳೆಯಾಗಲಾರಂಭಿಸಿದೆ. ಬಲವಾದ ಗಾಳಿಯೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಗುಡುಗು ಸಹಿತ ಭಾರೀ ವರ್ಷಧಾರೆ ಸುರಿಯುತ್ತಿದೆ.
ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಭಾನುವಾರದಿಂದಲೇ ಬೆಂಗಳೂರಿನ ವಾತಾವರಣ ಬದಲಾಗಿದೆ. ಸಿಲಿಕಾನ್ ಸಿಟಿ ಸಂಪೂರ್ಣ ತಂಪು ತಂಪಾಗಿತ್ತು. ಇದೀಗ ಮಳೆಯಾಗಲಾರಂಭಿಸಿದೆ.
ಬೆಂಗಳೂರು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಭಾಗಗಳಲ್ಲಿಯೂ ಮಳೆಯಾಗುತ್ತಿದೆ. ಫೆಂಗಲ್ ಚಂಡಮಾರುತಕ್ಕೆ ತಮಿಳುನಾಡು ಕರಾವಳಿಯಲ್ಲಿ ಭೂಕುಸಿತ ಉಂಟಾಗಿದೆ.
ಭಾರೀ ಮಳೆಯ ಎಚ್ಚರಿಕೆಯ ಹೊರತಾಗಿಯೂ, ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿವೆ.