4:28 PM Tuesday25 - November 2025
ಬ್ರೇಕಿಂಗ್ ನ್ಯೂಸ್
Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ…

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು