9:02 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಫೆಂಗಲ್ ಹಾವಳಿ: ಕರಾವಳಿ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ

03/12/2024, 12:57

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದ ನಿರಂತರ ಗುಡುಗು ಸಹಿತ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿ ಜಲಾವೃತವಾಗಿದೆ.


ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನಗರದ ಗೇಟ್ ವೇ ಎಂದೇ ಪರಿಗಣಿಸಲ್ಪಟ್ಟಿರುವ ಪಂಪ್‌ವೆಲ್, ಕೊಟ್ಟಾರ ಚೌಕಿ, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆ ಬಳಿಕ ಗುಡುಗು ಸಹಿತ ಭಾರೀ ಮಳೆ ಆರಂಭವಾಗಿತ್ತು. ಸಿಡಿಲಿನ ಅಬ್ಬರಕ್ಕೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಮಂಗಳವಾರ ಮುಂಜಾನೆಯೂ ಭಾರೀ ವರ್ಷಧಾರೆಯಾಗಿದೆ. ಈಗಲೂ ಮೋಡ ಕವಿದ ವಾತಾವರಣ ನೆಲೆಸಿದ್ದು, ಆಗಾಗ ಮಳೆ ಸುರಿಯುತ್ತಿದೆ‌. ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜಿಗೆ ಇಂದು ರಜೆ ಸಾರಲಾಗಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ರಾಜ್ಯದ ರಾಜ್ಯಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು 8 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು, ಮಂಡ್ಯ, ರಾಮನಗರ, ಭಾಗಶಃ ಹಾಸನ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆ ಈಗ ರಾಜ್ಯದ ಎಲ್ಲ ಕಡೆಗೂ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು