8:40 PM Monday20 - January 2025
ಬ್ರೇಕಿಂಗ್ ನ್ಯೂಸ್
ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ

ಇತ್ತೀಚಿನ ಸುದ್ದಿ

ಫೆಂಗಲ್ ಹಾವಳಿ: ಕರಾವಳಿ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ

03/12/2024, 12:57

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದ ನಿರಂತರ ಗುಡುಗು ಸಹಿತ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿ ಜಲಾವೃತವಾಗಿದೆ.


ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನಗರದ ಗೇಟ್ ವೇ ಎಂದೇ ಪರಿಗಣಿಸಲ್ಪಟ್ಟಿರುವ ಪಂಪ್‌ವೆಲ್, ಕೊಟ್ಟಾರ ಚೌಕಿ, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆ ಬಳಿಕ ಗುಡುಗು ಸಹಿತ ಭಾರೀ ಮಳೆ ಆರಂಭವಾಗಿತ್ತು. ಸಿಡಿಲಿನ ಅಬ್ಬರಕ್ಕೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಮಂಗಳವಾರ ಮುಂಜಾನೆಯೂ ಭಾರೀ ವರ್ಷಧಾರೆಯಾಗಿದೆ. ಈಗಲೂ ಮೋಡ ಕವಿದ ವಾತಾವರಣ ನೆಲೆಸಿದ್ದು, ಆಗಾಗ ಮಳೆ ಸುರಿಯುತ್ತಿದೆ‌. ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜಿಗೆ ಇಂದು ರಜೆ ಸಾರಲಾಗಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ರಾಜ್ಯದ ರಾಜ್ಯಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು 8 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು, ಮಂಡ್ಯ, ರಾಮನಗರ, ಭಾಗಶಃ ಹಾಸನ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆ ಈಗ ರಾಜ್ಯದ ಎಲ್ಲ ಕಡೆಗೂ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು