9:46 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

Karnataka Govt | ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ರಾಜ್ಯ ಸರಕಾರ ಮಹತ್ವದ ಘೋಷಣೆ

17/05/2025, 18:36

*ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿಯದ ಸರ್ಕಾರ, ಯಥಾ ಸ್ಥಿತಿ ಮುಂದುವರಿಸಲು ನಿರ್ಧಾರ*

ಬೆಂಗಳೂರು(reporterkarnataka.com): ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು.
ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌, ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು