10:29 PM Tuesday17 - June 2025
ಬ್ರೇಕಿಂಗ್ ನ್ಯೂಸ್
ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

Karnataka Govt | ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ರಾಜ್ಯ ಸರಕಾರ ಮಹತ್ವದ ಘೋಷಣೆ

17/05/2025, 18:36

*ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿಯದ ಸರ್ಕಾರ, ಯಥಾ ಸ್ಥಿತಿ ಮುಂದುವರಿಸಲು ನಿರ್ಧಾರ*

ಬೆಂಗಳೂರು(reporterkarnataka.com): ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು.
ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌, ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು