3:36 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

25/02/2026, 22:45

ಕಾರ್ಕಳ(reporterkarnataka.com): ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.

*ಅನೆದಾಳಿ: ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ:*
ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಉತ್ತರಿಸುತ್ತಾ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

*ಮಾದಕವಸ್ತುಗಳ ನಿಗ್ರಹ*
ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ನುಡಿದರು.

*ಕಾನೂನು ಕ್ರಮ:*
ಅಜೀಂ ಪ್ರೇಂಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

*ಗ್ಯಾರಂಟಿ ಯೋಜನೆ:*
ಗ್ಯಾರಂಟಿಗಳ ಬಗ್ಗೆ ಡಿಸಿಎಂ ಡಿಕೆಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ,ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದರು.

*ಪರಿಸರವಾದಿಗಳೊಂದಿಗೆ ಚರ್ಚೆ:*
ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದೇ ಎಂಬುದಕ್ಕೆ ಉತ್ತರಿಸುತ್ತಾ, ಇದಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

*ಥೀಮ್ ಪಾರ್ಕ್ ಪೂರ್ಣಗೊಳಿಸಲಾಗುವುದು:*
ಕಾರ್ಕಾಳದಲ್ಲಿ ಪರುಶರಾಮ ಥೀಮ್ ಪಾರ್ಕ್ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಧೀಂ ಪಾರ್ಕ್ ನಿರ್ಮಾಣ ಯೋಜನೆಯನ್ನು ಸದ್ಯದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಅವರು ನುಡಿದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರ ಪ್ರಕರಣದಬಗ್ಗೆ ಮಾತನಾಡಿ, ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
ಶಾಸಕರು ಸಚಿವರಾಗಲು ಬಯಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಶಾಸಕರು ಸಚಿವರಾಗಬಯಸುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು