9:38 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು