ಇತ್ತೀಚಿನ ಸುದ್ದಿ
ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ದುರಂತ : 39 ಸಾವು
13/07/2021, 09:12

ಕೈರೊ (Reporterkarnataka.com)
ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ.
ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ ಅಲ್-ಹುಸೇನ್ ಕೊರೊನಾವೈರಸ್ ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಇರಾಕ್ ಸುದ್ದಿ ಸಂಸ್ಥೆ ಹೇಳಿದೆ.
ದಕ್ಷಿಣ ಇರಾಕಿನ ನಗರ ನಾಸಿರಿಯಾದ ಅಲ್ ಹುಸೇನ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.