5:46 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಫಿರೋಜ್ ಪುರ: ಪ್ರಧಾನಿ ಕಾರನ್ನು ತಡೆದ ಪ್ರತಿಭಟನಾಕಾರರು; 20 ನಿಮಿಷ ಫ್ಲೈಓವರ್ ನಲ್ಲೇ ಕಾದ ಮೋದಿ; ರ‌್ಯಾಲಿ ರದ್ದು

05/01/2022, 19:33

ಚಂಡೀಗಢ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಪ್ರತಿಭಟನಾಕಾರರು ತಡೆದ ಘಟನೆ ಪಂಜಾಬ್ ನ ಫಿರೋಜ್ ಪುರ ಬಳಿ ಸೋಮವಾರ ನಡೆದಿದ್ದು, ಪ್ರಧಾನಿಯವರು ಸುಮಾರು 15ರಿಂದ 20 ರಸ್ತೆಯಲ್ಲಿ ಕಾಯುವಂತಾಯಿತು.

ಪಂಜಾಬ್​ನ ಫಿರೋಜ್​ಪುರದಲ್ಲಿ ಆಯೋಜಿಸಲಾದ ರ‌್ಯಾಲಿಗೆ ಪ್ರಧಾನಿ ಮೋದಿ ತೆರಳುತ್ತಿದ್ದರು. ಭಟಿಂಡಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಪ್ರಧಾನಿ ಮೋದಿ ಫಿರೋಜ್​ಪುರಕ್ಕೆ ಹೊರಟಿದ್ದರು. ಆದರೆ ಆ ರಸ್ತೆಯನ್ನು ಕೆಲವು ಪ್ರತಿಭಟನಾಕಾರರು ಕಾರನ್ನು ತಡೆದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿದ್ದ ವಾಹನ ಮತ್ತು ಬೆಂಗಾವಲು ವಾಹನಗಳೆಲ್ಲ ಫ್ಲೈಓವರ್ ಮೇಲೆ 15-20 ನಿಮಿಷ ನಿಲ್ಲುವಂತಾಗಿತ್ತು. ಬಳಿಕ ಫಿರೋಜ್​ಪುರ ರ‌್ಯಾಲಿಯನ್ನು ರದ್ದುಗೊಳಿಸಲಾಯಿತು. ಪ್ರಧಾನಿ ಮತ್ತೆ ಭಟಿಂಡಾ ವಿಮಾನ ನಿಲ್ದಾಣಕ್ಕೆ ವಾಪಸಾದರು.

ಪ್ರಧಾನಿ ನರೇಂದ್ರ ಮೋದಿಯವರ ರ‌್ಯಾಲಿ ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಭದ್ರತಾ ಲೋಪದಿಂದ ರದ್ದುಪಡಿಸಲಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ. 


ದೆಹಲಿಗೆ ವಾಪಸ್​ ಆಗಲು ಭಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದ ಪ್ರಧಾನಿ ಮೋದಿ ಅವರು ಅಲ್ಲಿ ಭದ್ರತೆ ಒದಗಿಸುವ ಸಲುವಾಗಿ ಇದ್ದ ಪಂಜಾಬ್​ ರಾಜ್ಯ ರಕ್ಷಣಾ ಅಧಿಕಾರಿಗಳಿಗೆ,  ‘ನಿಮ್ಮ(ಪಂಜಾಬ್) ಮುಖ್ಯಮಂತ್ರಿಗೆ ನನ್ನ ಧನ್ಯವಾದ ತಿಳಿಸಿ, ಕೊನೆಪಕ್ಷ ನಾನು ಭಟಿಂಡಾ ವಿಮಾನ ನಿಲ್ದಾಣದವರೆಗೆ ಜೀವಂತವಾಗಿಯಾದರೂ ಬರುವಂತೆ ಮಾಡಿದುದಕ್ಕೆ ಎಂದು ಹೇಳಿರುವುದಾಗಿ ಎಎನ್​ಐ ಟ್ವೀಟ್ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು