10:20 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್: ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿಯ ಸಾಧನೆ

10/04/2026, 21:17

ಬಳ್ಳಾರಿ(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿ ಅಶೋಕ್ ಕುಮಾರ್ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿ ಗಮನಸೆಳೆದಿದ್ದಾನೆ.
ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದು, 600ಕ್ಕೆ 481 ಅಂಕ ಪಡೆಯುವ ಮೂಲಕ ಶೇಕಡ 81 ರಷ್ಟು ಫಲಿತಾಂಶ ಬಂದಿದೆ. ಕನ್ನಡ 82, ಇಂಗ್ಲಿಷ್ 69, ಇತಿಹಾಸ 94, ಅರ್ಥಶಾಸ್ತ್ರ 84, ಸಮಾಜಶಾಸ್ತ್ರ 77, ರಾಜ್ಯಶಾಸ್ತ್ರದಲ್ಲಿ 75 ಅಂಕ ಬಂದಿದೆ.
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ 7 ವರ್ಷಗಳಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಅಶೋಕ್ ಕುಮಾರ್ ಓದುವ ಅಭ್ಯಾಸ ಬೆಳೆಸಿಕೊಂಡು ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು ಸಾಧನೆ ಮಾಡಿರುವುದು ವಿಶೇಷವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು