11:51 AM Thursday15 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ: 10ರಂದು ಮುಹೂರ್ತ ಮತ್ತು ಲಾಂಛನ ಬಿಡುಗಡೆ

08/04/2026, 20:36

ಮಂಗಳೂರು(reporterkarnataka.com): ತನ್ನ ಅಸ್ತಿತ್ವದ ನಲ್ವತ್ತನೇ ವರ್ಷಾಚರಣೆ (1986 – 2026) ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ಆಯೋಜಿಸುತ್ತಿದೆ.
ನವೆಂಬರ್ 3ರಿಂದ 15 ರವರೆಗೆ ಮಂಗಳೂರಿನಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ಶುಕ್ರವಾರ ಏಪ್ರಿಲ್ 10ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 4.00 ಗಂಟೆಗೆ ನೆರವೇರಲಿದೆ.
ರಾಜ್ಯ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ದಿನೇಶ್ ಗುಂಡೂರಾವ್ ಲಾಂಛನ ಬಿಡುಗಡೆಗೊಳಿಸುವರು. ಗೌರವ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಗೋವಾದ ಕಲಾವಿದ ಮೈಕಲ್ ಗ್ರೇಶಿಯಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ ಪಿಂಟೊ ತಿಳಿಸಿದರು.


ಈ ಸಂಗೀತ ಮಹಾ ಸಮಾವೇಶದಲ್ಲಿ 12 ದಿನ, 12 ಗಂಟೆ, 12 ನಿಮಿಷಗಳ, ಸಮೂಹ ಗಾಯನದ ಅತೀ ದೀರ್ಘ ಸಮಯದ ಗಿನ್ನೆಸ್ ದಾಖಲೆ ರಚಿಸಲು ಪ್ರಯತ್ನಿಸಲಾಗುವುದು. ಈ ಪ್ರಯತ್ನದಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಮತ್ತಿತರ ರಾಜ್ಯಗಳಿಂದಲೂ ಹಾಗೂ ವಿದೇಶಗಳಿಂದಲೂ 6000 ಕ್ಕೂ ಮಿಕ್ಕಿ ಹಾಡುಗಾರರು ಭಾಗವಹಿಸಲಿದ್ದಾರೆ. ಈ ದಾಖಲೆಯಲ್ಲಿ ಕ್ರೈಸ್ತ, ಜಿಎಸ್‌ಬಿ, ದಾಲ್ದಿ, ಕುಡ್ಮಿ, ಖಾರ್ವಿ, ಸಿದ್ದಿ, ಸಿರಿಯನ್ ಆರ್ಥೊಡಾಕ್ಸ್ ಮತ್ತಿತರ ಸಮುದಾಯಗಳ ಗಾಯಕರು ಸುಮಾರು 5000 ಕೊಂಕಣಿ ಹಾಡುಗಳನ್ನು ಹಾಡಲಿದ್ದಾರೆ. ಆ ದಿನಗಳಲ್ಲಿ ಸಂಗೀತಕ್ಕೆ ಸಂಬಂಧಪಟ್ಟ ವಿವಿಧ ಸಂವಾದ ಗೋಷ್ಟಿಗಳನ್ನು ಆಯೋಜಿಸಲಾಗುವುದು. ಸಂಗೀತದಲ್ಲಿ ಮಹತ್ತರ ಸಾಧನೆಗೈದ ಹಿರಿಯರನ್ನು ಸಮ್ಮಾನಿಸಲಾಗುವುದು, ಕೀರ್ತಿ ಮಂದಿರ ಹಾಗೂ ಸಂಗೀತ ಮತ್ತು ಸಂಸ್ಕೃತಿಗೆ ಸಂಬಂಧಪಟ್ಟ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗುವುದು. ಕೊಂಕಣಿ ಸಂಗೀತಕ್ಕೆ ಮಹೋನ್ನತ ಕೊಡುಗೆ ನೀಡಿದ ಎರಿಕ್ ಒಝೇರಿಯೊ ಅವರಿಗೆ ಅರ್ಪಣೆಯಾಗಿ ಈ ಕಾರ್ಯಕ್ರಮವನ್ನು ನಡೆಯಲಿದೆ.
ಪತ್ರಿಕಾಗೋಷ್ಟಿಯಲ್ಲಿ ರೊಯ್ ಕ್ಯಾಸ್ತೆಲಿನೊ (ಪಿರ್ಜೆಂತ್, ಕಲಾಂಗಣ್), ಜೊಯೆಲ್ ಪಿರೇರಾ (ಸಂಗೀತ ನಿರ್ದೇಶಕರು, ಪ್ರ.ವಿ.ಕೊಂ.ಸಂ.ಮಾ.ಸ.), ಸ್ಟ್ಯಾನಿ ಆಲ್ವಾರಿಸ್ (ಸಂಘಟಕರು, ಮಾಂಡ್ ಸೊಭಾಣ್), ನವೀನ್ ಲೋಬೊ (, ಮಾಂಡ್ ಸೊಭಾಣ್), ರೊನಾಲ್ಡ್ ಕ್ರಾಸ್ತಾ (ಕಾರ್ಯದರ್ಶಿ, ಮಾಂಡ್ ಸೊಭಾಣ್) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು