ಇತ್ತೀಚಿನ ಸುದ್ದಿ
ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ
18/04/2022, 10:09
ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ.
ಮೃತಪಟ್ಟವರನ್ನು ಪಶ್ಚಿಮ ಬಂಗಾಳದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಎಂದು ಗುರುತಿಸಲಾಗಿದೆ.
ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದರು. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು.
ಎಸ್ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದೆ.