9:08 AM Thursday4 - June 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ…

ಇತ್ತೀಚಿನ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ

04/06/2026, 09:07

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarmataka@gmail.com

ಮುಂಗಾರು ಆರಂಭದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 1ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿ ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಮೀನುಗಾರಿಕೆ ಉಪ ನಿರ್ದೇಶಕರಾದ ಸಿ.ಎಸ್.ಸಚಿನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು