12:19 AM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ : ಮಂಗಳೂರು ಮಹಾನಗರಪಾಲಿಕೆ ಎಚ್ಚರಿಕೆ

25/09/2024, 19:39

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡು ಬಂದಿದೆ.
ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘಡಗಳು ಸಂಭವಿಸಿದ್ದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು