ಇತ್ತೀಚಿನ ಸುದ್ದಿ
ಜಾನಪದ ವಿದ್ವಾಂಸ ಡಾ. ಕೆ.ಚಿನ್ನಪ್ಪಗೌಡ, ಹಾಡುಗಾರ್ತಿ ಸಿರಿಯಮ್ಮಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ
04/04/2025, 22:50

ಬೆಂಗಳೂರು(reporterkarnataka.com): ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2023ನೇ ಸಾಲಿನ ಡಾ. ಜೀಶಂಪ ಜಾನಪದ ತಜ್ಞ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ಅಕಾಡೆಮಿ ಕಾರ್ಯಾಲಯದಲ್ಲಿ ಪ್ರದಾನ ಮಾಡಲಾಯಿತು.
ಜೀವಮಾನ ಸಾಧನೆಗಾಗಿ 2023ನೇ ಸಾಲಿನ ಡಾ. ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿಯನ್ನು ಡಾ. ಕೆ.ಚಿನ್ನಪ್ಪಗೌಡ, (ಜಾನಪದ ವಿದ್ವಾಂಸರು ದಕ್ಷಿಣ ಕನ್ನಡ ಜಿಲ್ಲೆ) ಹಾಗೂ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರಾದ ಚಿತ್ರದುರ್ಗ ಜಿಲ್ಲೆಯ ಜನಪದ ಮಹಾಕಾವ್ಯಗಳ ಹಾಡುಗಾರ್ತಿ ಸಿರಿಯಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಭಾಗವಹಿಸಿ
ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ, ಅಕಾಡೆಮಿ ಸದಸ್ಯರಾದ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಹಾಗೂ ರಿಜಿಸ್ಟ್ರಾರ್ ರವರಾದ ಎನ್. ನಮ್ರತಾ ಉಪಸ್ಥಿತರಿದ್ದರು.