7:54 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ

22/04/2025, 20:36

ಬೆಂಗಳೂರು(reporterkarnataka.com): ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.


ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421ದರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವ ರೆಡ್ಡಿ ಕರೂರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು