1:26 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ: ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಎರಡನೇ ದಿನಕ್ಕೆ

19/01/2025, 19:34

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ. ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ಇಂದು ಎರಡನೇ ದಿನಕ್ಕೆ ತಲುಪಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಶನಿವಾರ ಅಧಿಕೃತ ಚಾಲನೆ ನೀಡಲಾಗಿತ್ತು.
ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡುತ್ತಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಸೆಲ್ಫಿಗೆ ಮುಗಿ ಬೀಳುತ್ತಿದ್ದರು. ವಾರಾಂತ್ಯದ ಹಿನ್ನೆಲೆಯಲ್ಲಿ ಮೊದಲ ದಿನವೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತ ಸೇರಿದ್ದ ಜನರು ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು.
“ಸ್ಟ್ರೀಟ್ ಫುಡ್ ಫಿಯೆಸ್ಟ” ಗೆ ಆರಂಭದ ದಿನವೇ ಆಹಾರ ಪ್ರಿಯರಿಂದ ನಿರೀಕ್ಷೆಗೂ ಮೀರಿ ಜನ ಸ್ಪಂದನೆ ಸಿಕ್ಕಿದ್ದು ಜನವರಿ 22ರ ವರೆಗೆ ಪ್ರತಿನಿತ್ಯ ಸಂಜೆ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ತುಳುನಾಡ ಹಾಗೂ ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು.


ಉದ್ಘಾಟನಾ ಸಮಾರಂಭದಲ್ಲಿ ಮೇಯರ್ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಯತೀಶ್ ಬೈಕಂಪಾಡಿ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಜಗದೀಶ್ ಕದ್ರಿ, ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಗೂ ಬಿಜೆಪಿಯ ಕಾರ್ಪೊರೇಟರ್ ಗಳ ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು.

ಖ್ಯಾತ ನಿರೂಪಕ ಕಿರಣ್ ಶೆಣೈಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು