7:34 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Breaking : ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಗಂಡು ಮಗು ನಿಧನ !

19/04/2022, 00:29

Reporterkarnataka.com

ಫುಟ್ಬಾಲ್‌ನ ಜೀವಂತ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಅವರ ಗಂಡು ಮಗು ನಿಧನವಾಗಿರುವ ಬಗ್ಗೆ ವರದಿಯಾಗಿದೆ.

ಹೌದು, ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಅವರ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಗಂಡು ಮಗುವನ್ನು ಕಳೆದುಕೊಂಡಿರುವ ಬಗ್ಗೆ ಅಧಿಕೃತ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

” ಇದು ಯಾವುದೇ ಪೋಷಕರು ಅನುಭವಿಸಬಹುದಾದ ದೊಡ್ಡ ನೋವು” ಎಂದು ರೊನಾಲ್ಡೊ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದು, ಅತ್ಯಂತ ಕಠಿಣ ಕ್ಷಣಗಳನ್ನು ಎದುರಿಸುತ್ತಿದ್ದು, ಎಲ್ಲರೂ ಏಕಾಂತವನ್ನು ನೀಡಿ ಸಹಕರಿಸಿ ಎಂದು ಪೋಸ್ಟ್ ಮಾಡಿದ್ದಾರೆ.

“ನಮ್ಮ ಹೆಣ್ಣು ಮಗುವಿನ ಜನನವು ಈ ಕ್ಷಣವನ್ನು ಸ್ವಲ್ಪ ಭರವಸೆಯಲ್ಲಿ ಬದುಕಲು ನಮಗೆ ಶಕ್ತಿಯನ್ನು ನೀಡುತ್ತಿದೆ.”
“ವೈದ್ಯರು ಮತ್ತು ದಾದಿಯರಿಗೆ ಹಾಗೂ ಎಲ್ಲಾ ತಜ್ಞರ ಆರೈಕೆ ಮತ್ತು ಬೆಂಬಲಕ್ಕಾಗಿ ನಾವು ಧನ್ಯವಾದ ಹೇಳಲು ಬಯಸುತ್ತೇವೆ. ಈ ನಷ್ಟದಿಂದ ನಾವೆಲ್ಲರೂ ಧ್ವಂಸಗೊಂಡಿದ್ದೇವೆ ಮತ್ತು ಈ ಕಷ್ಟದ ಸಮಯದಲ್ಲಿ ಸಹಕರಿಸಿ” ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು