7:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ ಬಂಧನ

22/04/2026, 11:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಲೀಕ ಸೇರಿ ಇಬ್ಬರ ಬಂಧಿಸಲಾಗಿದೆ.
ಅಮೆರಿಕಾದ ವಾಷಿಂಗ್ಟನ್ ಮಹಿಳೆ ಮೇಲೆ ಕೊಡಗಿನ ಪೊನ್ನoಪೇಟೆ ತಾಲ್ಲೂಕಿನ ಕುಟ್ಟ ಎಂಬ ಗ್ರಾಮ ವ್ಯಾಪ್ತಿಯ ದೇವಿ ವಿಲ್ಲಾ ಹೋಂಸ್ಟೇನಲ್ಲಿ ಲೈಂಗಿಕ ಕಿರುಕುಳ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ.
ಹೋಂಸ್ಟೇನಲ್ಲಿ ಕೆಲಸಕ್ಕೆ ಇದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕೊಟ್ಟ ಬಳಿಕ ಅತ್ಯಾಚಾರ ನಡೆಸಲಾಗಿದೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಕಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದoತೆ
ಹೋಂಸ್ಟೇ ಮಾಲೀಕ ವಿಶಾಲ್ ಪೊನ್ನಪ್ಪ ಪ್ರಕರಣ ಮುಚ್ಚಲು ಪ್ರಯತ್ನ ನಡೆಸಿದ್ದು,ಮೂರು ದಿನ ಸಂತ್ರಸ್ತೆ ಯಾರನ್ನೂ ಸಂಪರ್ಕಿಸದಿರಲು ವೈಫೈ ಸಂಪರ್ಕ ಕಟ್ ಮಾಡಿದ್ದರು ಎನ್ನಲಾಗಿದೆ. ಮೂರು ದಿನದ ಬಳಿಕ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟ ವಿದೇಶಿ ಸಂತ್ರಸ್ತೆ.
ಅಮೆರಿಕದಲ್ಲಿರುವ ರಾಯಬಾರಿ ಕಚೇರಿಗೆ ಮಾಹಿತಿ ನೀಡಿದ್ದು, ಮೈಸೂರಿನಲ್ಲಿನಲ್ಲಿರುವ ಪೊಲೀಸ್ ಅಧಿಕಾರಿಗಳನ್ನು ಇಮೇಲ್ ಮೂಲಕ ಅಮೆರಿಕದ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಅಲ್ಲಿನ ಅಧಿಕಾರಿಗಳ ಸೂಚನೆ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದೆ, ಮಂಗಳವಾರ ಜಿಲ್ಲೆಗೆ ವಿದೇಶಾಂಗ ಸಚಿವಾಲಯದ ಡೆಲ್ಲಿ ಹಾಗೂ ಚೆನ್ನೈ ಕಚೇರಿಗಳಿಂದ ಕೊಡಗು ಜಿಲ್ಲೆಗೆ ಭೇಟಿ ನೀಡಿರುವ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ತನಿಖೆ ಹಂತದಲ್ಲಿರುವ ಹಿನ್ನಲೆಯಲ್ಲಿ
ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ನಿರಾಕರಿಸಿದ್ದಾರೆ. ಒಂದೆರೆಡು ದಿನದಲ್ಲಿ ತನ್ನ ದೇಶಕ್ಕೆ ಮರಳಿರುವ ಸಂತ್ರಸ್ತೆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಸದ್ಯ ಅತ್ಯಾಚಾರ ನಡೆಸಿದ ಆರೋಪಿ ಜಾರ್ಕಂಡ್ ಮೂಲದ ವೃಜೇಶ್ ಕುಮಾರ್ ಮತ್ತು ಮಾಲೀಕ ವಿಶಾಲ್ ಪೊನ್ನಪ್ಪರನ್ನು ಮೇ 3 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು