11:19 PM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು ವಶಕ್ಕೆ

17/07/2026, 21:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಬೆಟ್ಟತೂರು ವ್ಯಾಪ್ತಿಯಲ್ಲಿ ಕಾಡು ಕೋಣ ಬೇಟೆ ಮಾಡಿ ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆ ಜೀಪು ಹತ್ತಿಸಲು ಯತ್ನಿಸಿದ ವೇಳೆ ಅರಣ್ಯ ಇಲಾಖೆ ಬೇಟೆಗಾರರ ಮೇಲೆ ಗುಂಡು ಹಾರಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.ಬೆಟ್ಟತೂರು ಗ್ರಾಮದ ಸುಬ್ರಮಣ್ಯ ದೇವಾಲಯದ ಮುಖ್ಯ ದ್ವಾರದ ಬಸ್ ಸ್ಟಾಪ್ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಬೇಟೆಗಾರರ ಮೇಲೆ ಮೂರು ಸುತ್ತು ಗುಂಡು ಹಾರುತಿದ್ದಂತೆ ಕಾಫಿ ತೋಟದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಜುಬೇರ್ ಮತ್ತು ಯಾಕೂಬ್ ರನ್ನು ಬಂಧಿಸಲಾಗಿದೆ. ಬಂದಿತರಿಂದ 266 ಕೆಜಿ ಮಾಂಸ, ಕೊಡಲಿ, ಹಗ್ಗ ಹಾಗೂ ಚಾಕು, ಚೂರಿ ಸೇರಿದಂತೆ ಒಂದು ಜೀಪ್ ಅನ್ನು ವಶಕ್ಕೆ ಪಡೆಯಲಾಗಿದೆ.


ಗಾಯಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿ ಚಿಕಿತ್ಸೆ ನೀಡಲಾಗುತ್ತಿದ್ದು ಮಡಿಕೇರಿ ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು