9:13 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ ಈಶ್ವರ ಖಂಡ್ರೆ ಸೂಚನೆ

05/03/2025, 16:00

ಬೆಂಗಳೂರು(reporterkarnataka.com): ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಭಾರತೀಯ ವಾಯು ಪಡೆ ಮಾ.1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು. ಇದನ್ನು ತಡೆಯಲಾಗಿದೆ ಎಂದು ಅರಣ್ಯಾಧಿಕಾರಿಗಳು ಇಂದು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಈ ಸೂಚನೆ ನೀಡಿದ್ದಾರೆ.
ಸರ್ಕಾರದ 2017ರ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದು ಸದರಿ ಜಮೀನು, ಮೀಸಲು ಅರಣ್ಯ ಎಂಬ ಫಲಕವನ್ನೂ ಹಾಕಿದೆ. ಈ ಅರಣ್ಯ ಭೂಮಿ ತೆರವು ಮಾಡುವಂತೆ ರಕ್ಷಣಾ ಸಚಿವಾಲಯಕ್ಕೆ ಪತ್ರವನ್ನೂ ಬರೆಯಲಾಗಿದೆ. ಸಂಪೂರ್ಣ ಮಾಹಿತಿ ಇದ್ದರೂ ವಾಯುಪಡೆ ಅನಧಿಕೃತವಾಗಿ, ನಿಯಮ ಮೀರಿ ನಿರ್ಮಾಣ ಕಾಮಗಾರಿ ನಡೆಸುತ್ತಿತ್ತು, ಪ್ರಸ್ತುತ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಪ್ರಸ್ತುತ 444 ಎಕರೆ ಜಮೀನಿನ ಪೈಕಿ ಸುಮಾರು 15 ಎಕರೆ ಪ್ರದೇಶದಲ್ಲಿ ವಾಯುಪಡೆ ಶೂಟಿಂಗ್ ರೇಂಜ್ ನಿರ್ಮಿಸಿಕೊಂಡು ತರಬೇತಿ ನೀಡುತ್ತಿದೆ. ಸ್ವಲ್ಪ ಜಮೀನಿನಲ್ಲಿ ವಾಯುಪಡೆಯ ಕಚೇರಿ ಇತ್ಯಾದಿ ನಿರ್ಮಿಸಿದೆ. ಉಳಿದ ಭೂಮಿ ಅರಣ್ಯ ಸ್ವರೂಪದಲ್ಲೇ ಇದ್ದು, ಮರ, ಗಿಡಗಳಿಂದ ಸಮೃದ್ಧವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಕೂಡಲೇ ಅರಣ್ಯ ಸ್ವರೂಪದ ಜಮೀನನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಮತ್ತು ವಾಯುಪಡೆ ಬಳಕೆ ಮಾಡುತ್ತಿರುವ ಜಮೀನಿಗೆ ಸಂಬಂಧಿಸಿದಂತೆ ಪರ್ವೇಶ್ ಪೋರ್ಟಲ್ ನಲ್ಲಿ ನಿಯಮಾನುಸಾರ ಅರ್ಜಿ ಹಾಕಿ ಎಫ್.ಸಿ. ಪಡೆಯಲು ವಾಯುಪಡೆಗೆ ಪತ್ರ ಬರೆಯಲು ಈಶ್ವರ ಖಂಡ್ರೆ ಸೂಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು