ಇತ್ತೀಚಿನ ಸುದ್ದಿ
ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ
06/05/2025, 16:59

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ರೂಪಶಶಿಕಲ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.