ಇತ್ತೀಚಿನ ಸುದ್ದಿ
ಗ್ರಾಪಂ ಮಾಜಿ ಅಧ್ಯಕ್ಷನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು
13/12/2025, 13:55
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮ ಪಂಚಾಯಿತಿಯ ಗ್ರಾಮವೊಂದರ 11 ವರ್ಷದ ಬಾಲಕಿ ಡಿಸೆಂಬರ್ 11 ರಂದು ನ್ಯಾಯ ಬೆಲೆ ಅಂಗಡಿಗೆ ಮೊಟ್ಟೆ ಖರೀದಿಸಲು ತೆರಳಿದ ಸಂದರ್ಭ ಅಂಗಡಿ ನಡೆಸುತ್ತಿರುವ ಮಾಲ್ದಾರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಜಾಕ್ (58) ಎಂಬಾತ ಬಾಲಕಿಯನ್ನು ಪೀಡಿಸಿ ಅಂಗಡಿ ಒಳಗೆ ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿ ತಪ್ಪಿಸಿಕೊಂಡು ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಳಿಕ ಬಾಲಕಿ ಪೋಷಕರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೋಕ್ಸೋ ಸೇರಿದಂತೆ ವಿವಿಧ ಬಿಎನ್ ಎಸ್ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ. ಆರೋಪಿ ರಜಾಕ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.












