3:52 PM Friday30 - October 2026
ಬ್ರೇಕಿಂಗ್ ನ್ಯೂಸ್
ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ

ಇತ್ತೀಚಿನ ಸುದ್ದಿ

ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ

30/10/2026, 15:15

ಬೆಳಗಾವಿ(reporterkarnataka.com): ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ (87) ಅವರು ಶುಕ್ರವಾರ ನಿಧನರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಿವಾಸದಲ್ಲಿ ಲಿಂಗೈಕ್ಯರಾಗಿದ್ದು, ತಂದೆಯ ಸಾವಿನ ಬಗ್ಗೆ ಪುತ್ರ, ಶಾಸಕ ಮಹಾಂತೇಶ ಕೌಜಲಗಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬೈಲಹೊಂಗಲ ಕ್ಷೇತ್ರದಿಂದ ಮೂರು ಬಾರಿ ಶಿವಾನಂದ ಕೌಜಲಗಿ ಅವರು ಶಾಸಕರಾಗಿ ಆಯ್ಕೆ ಆಗಿದ್ದರು. 1996ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಸೇವೆ ಸಲ್ಲಿಸಿದ್ರು. ಲೋಕೋಪಯೋಗಿ ಖಾತೆ ಸಚಿವರಾಗಿ ಕೆಲಸ ಮಾಡಿದ್ದ ಕೌಜಲಗಿ ಅವ್ರು, ಕೆಎಲ್‌ಇ ಸಂಸ್ಥೆ ಅಧ್ಯಕ್ಷರಾಗಿದ್ದರು. ಕೌಜಲಗಿ ‌ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

*ಶಾಸಕ ಮಹಾಂತೇಶ ಕೌಜಲಗಿ ಭಾವುಕ ಪೋಸ್ಟ್*
ಅತ್ಯಂತ ವಿಷಾದದಿಂದ ಈ ವಿಷಯವನ್ನು ತಿಳಿಸುತ್ತಿದ್ದೇನೆ. ನನ್ನ ಪೂಜ್ಯ ತಂದೆಯವರು, ಕರ್ನಾಟಕ ಸರ್ಕಾರದ ಮಾಜಿ ಲೋಕೋಪಯೋಗಿ ಸಚಿವರು, ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಮಾಜಿ ಅಧ್ಯಕ್ಷರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ನನ್ನ ಮಾರ್ಗದರ್ಶಕರು, ಗುರುಗಳಾದ ಸನ್ಮಾನ್ಯ ಶ್ರೀ ಶಿವಾನಂದ ಕೌಜಲಗಿ ಅವರು ಇಂದು ಬೆಳಿಗ್ಗೆ ಶಿವಾಧೀನರಾದರು.

ಇತ್ತೀಚಿನ ಸುದ್ದಿ

ಜಾಹೀರಾತು