ಇತ್ತೀಚಿನ ಸುದ್ದಿ
ಮಾಜಿ ಪ್ರಧಾನಿ ದೇವೇಗೌಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಳೆ ಭೇಟಿ: ಝಡ್ ಪ್ಲಸ್ ಭದ್ರತೆ
28/02/2026, 15:30
ಸುಬ್ರಹ್ಮಣ್ಯ(reporterkarnataka.com): ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವರು.
ಸಂಜೆ 5.20ಕ್ಕೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್ನಲ್ಲಿ ಬಂದಿಳಿಯುವರು. ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಅಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್ಗೆ ತೆರಳಿ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು. ಪ್ರವಾಸ ವೇಳೆ ಮಾಜಿ ಪ್ರಧಾನಿ ಅವರಿಗೆ ಝಡ್ ಪ್ಲಸ್ ಭದ್ರತೆ ಇರಲಿದೆ.












