12:59 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಉದ್ಯಮಿಯ ಅಪಹರಿಸಿ ಹಣ ಸುಲಿಗೆ ಪ್ರಕರಣ: ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ

07/02/2026, 17:37

ಬೆಂಗಳೂರು(reporterkarnataka.com):ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉದ್ಯಮಿ ಮನೋಜ್ ಕುಮಾರ್‌ ಅವರಿಗೆ ಪರಿಚಿತನಾಗಿದ್ದ ರಾಜೇಶ್‌ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್‌ ಒತ್ತಡ ಹೇರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು