8:11 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ: 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ

16/02/2026, 14:52

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಈ ನಿಲ್ದಾಣದಲ್ಲಿ ಮಳೆಗಾಲದಲ್ಲಿ ಸಮಸ್ಯೆ ಆಗುತ್ತಿತ್ತು. ಹಾಗಾಗಿ ಹೊಸದಾಗಿ ಅದರಲ್ಲೂ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಮಲೆನಾಡು ಪ್ರದೇಶಾಭಿವೃದ್ದಿ ನಿಗಮ ಮಂಡಳಿಯಿಂದ 15 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸುವ ಸಲುವಾಗಿ ಶಂಕುಸ್ಥಾಪನೆ ಮಾಡಲಾಗಿದೆ. ಈ ನಿಲ್ದಾಣ ಎಲ್ಲರಿಗೂ ಅನುಕೂಲ ಆಗಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ದಿ ನಿಗಮ ಮಂಡಳಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಹೇಳಿದರು.
ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬಸ್ ನಿಲ್ದಾಣವನ್ನು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿ ಈ ನಿಲ್ದಾಣ ಪ್ರತಿಯೊರ್ವ ಸಾರ್ವಜನಿಕರಿಗೆ ಅನುಕೂಲ ಆಗಬೇಕು. ವಿದ್ಯುತ್ ದೀಪ ಹಾಕಿ ಹಾಗೆ ಸಿಸಿಟಿವಿ ಅಳವಡಿಸಬೇಕು. ತೀರ್ಥಹಳ್ಳಿ ಅತ್ಯಂತ ಸುಂದರವಾದ ಊರು. ಈಗ ಇನ್ನಷ್ಟು ಸುಂದರವಾಗಿ ಕಾಣುವಂತೆ ಆಗಬೇಕು ಎಂದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ ರಸ್ತೆ ಅಗಲವಾದ ಕಾರಣ ಬಸ್ ನಿಲ್ದಾಣ ಸಣ್ಣದಾಯಿತು. ಇಲ್ಲಿ ಸಾಗರ ರಸ್ತೆ ಹಾಗೂ ಆಗುಂಬೆ ಕಡೆ ಎರಡು ಭಾಗದಲ್ಲಿ ಬಸ್ ನಿಲ್ದಾಣ ಇದೆ. ಆದರೆ ಸಣ್ಣದಾಗಿರುವ ಕಾರಣ ಅದರಲ್ಲೂ ಮಳೆಗಾಲದಲ್ಲಿ ಸಮಸ್ಯೆ ಆಗುತ್ತಿತ್ತು. ಈ ಕಾರಣದಿಂದ ಇಂದು ಶಂಕು ಸ್ಥಾಪನೆ ಮಾಡಿದ್ದೇವೆ. ಇದನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಹಾಗೆ ಭಾರತಿಪುರದಿಂದ ಬೈಪಾಸ್ ಆಗುತ್ತಿದೆ. ಇನ್ನು ಆಗುಂಬೆಯಲ್ಲಿ ಟನಲ್ ಮಾಡಲು ಈಗಾಗಲೇ ಎಲ್ಲಾ ತಯಾರಿ ನಡೆದಿದೆ. ಒಟ್ಟಾರೆ ತೀರ್ಥಹಳ್ಳಿ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ಕೆಲಸ ನಡೆಯುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ, ಉಪಾಧ್ಯಕ್ಷರಾದ ಗೀತಾ ರಮೇಶ್, ಸದಸ್ಯರಾದ ಸೊಪ್ಪುಗುಡ್ಡೆ ರಾಘವೇಂದ್ರ, ರಹಮತ್ ಉಲ್ಲಾ ಅಸಾದಿ, ಜ್ಯೋತಿ ಮೋಹನ್, ನವೀನ್ ಏತಿರಾಜ್, ಸುಶೀಲಾ ಶೆಟ್ಟಿ, ಮಂಜುಳಾ ನಾಗೇಂದ್ರ, ಶಬನಮ್, ಸಂದೇಶ್ ಜವಳಿ, ರಾಘವೇಂದ್ರ ಶೆಟ್ಟಿ, ಡಾ. ಸುಂದರೇಶ್, ಬಸವಾನಿ ವಿಜಯ್ ದೇವ್, ಜೀನ ವಿಕ್ಟರ್ ಡಿಸೋಜ ಸೇರಿ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು