7:27 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿರಾಜಪೇಟೆಯಲ್ಲಿ ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

08/04/2026, 20:32

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ಶಾಂತಿ ನಗರ ನಿವಾಸಿ ಹರ್ಷದ್ ಖಾನ್(೨೫), ಮೈಸೂರು ಬಿಡಿ ಕಾಲೋನಿಯ ಅಜೀತ್ ಸೇಟ್ ನಗರ ನಿವಾಸಿ ಮುಜಾಮಿಲ್ ಅಹಮ್ಮದ್(೪೬), ಅಪ್ಸಲ್ ಬಾಷಾ(೨೮), ಮೈಸೂರು ಕಲ್ಯಾಣ ಗಿರಿ ನಿವಾಸಿ ಸಾಕ್ಯೂಬ್(೩೨) ಬಂಧಿತ ಆರೋಪಿಗಳು. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಜಿ ಗ್ರಾಮದ ಹೆಗ್ಗಳ ಜಂಕ್ಷನ್ ಸಮೀಪ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ, ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ೫೭೬ ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ವಿರಾಜಪೇಟೆ ಉಪವಿಭಾಗ ಡಿವೈಎಸ್‌ಪಿ ಮಹೇಶ್ ಕುಮಾರ್, ವಿರಾಜಪೇಟೆ ವೃತ್ತ ಸಿಪಿಐ ಅನೂಪ್ ಮಾದಪ್ಪ, ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಮೋದ್, ಎಎಸ್‌ಐ ಟಿ.ಪಿ. ಮಂಜುನಾಥ, ಸಿಬ್ಬಂದಿಗಳಾದ ಬಿ.ಎಂ. ಹೇಮಂತ್ ಕುಮಾರ, ತೇಜಸ್ ಕುಮಾರ್, ಎನ್.ಆರ್. ಹರೀಶ್, ಸಾಗರ್, ಕುಮಾರ, ಮುದಿಯಜ್ಜಳ ಭೀಮಾಜ್ಜ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಆರ್.ಎನ್. ಬಿಂದು ಮಣಿ ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು