6:39 PM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

19/08/2026, 18:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ದಕ್ಷಿಣ ವಲಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಅಂಡರ್-17 ಫುಟ್ಬಾಲ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಜೀವಿತ್ ಚಂಗಪ್ಪ ಹಾಗೂ ಶೋಬಿತ್ ಕೆ.ಎಲ್. ಅವರು ಕರ್ನಾಟಕ ತಂಡಕ್ಕೆ ಆಯ್ಕೆಯಾಗಿರುವುದು ಶಾಲೆ ಹಾಗೂ ಕೊಡಗು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.
ತಂಡದಲ್ಲಿ ಫಾರ್ವರ್ಡ್ ಆಟಗಾರರಾಗಿ ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಹಾಗೂ ಜೀವಿತ್ ಚಂಗಪ್ಪ ಗೋಲ್ ಕೀಪರ್ ಆಗಿ ಶೋಬಿತ್ ಕೆ.ಎಲ್. ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಇವರು ಶಾಲೆಯ ಕ್ರೀಡಾ ತರಬೇತುದಾರರಾದ ಹಂಚೆಟ್ಟಿರ ಈರಪ್ಪ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.
ಕರ್ನಾಟಕ ತಂಡವು ಆಗಸ್ಟ್ 21ರಂದು ಬೆಂಗಳೂರಿನ ಬಿಷಪ್ ಕಾಟನ್ ಪಬ್ಲಿಕ್ ಸ್ಕೂಲ್‌ನಲ್ಲಿ ಗೋವಾ ರಾಜ್ಯದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಮಡಿಕೇರಿಯಿಂದ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿರುವ ನಾಲ್ವರು ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪೋಷಕರು ಹಾಗೂ ಕೊಡಗು ಜಿಲ್ಲೆಯ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿ, ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಕರ್ನಾಟಕಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು