2:16 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

‘ಫ್ರೀಫೈರ್’ ಗೇಮ್ ಅಡಿಕ್ಷನ್ : ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

24/04/2026, 20:45

ಹುಬ್ಬಳ್ಳಿ(reporterkarnataka.com): ಆನ್‌ಲೈನ್ ಗೇಮ್‌ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಬ್ಬಳ್ಳಿ ನಗರದ ಉದಯನಗರದಲ್ಲಿ ನಡೆದಿದೆ. ‘ಫ್ರೀಫೈರ್’ ಗೇಮ್‌ಗೆ ಅತಿಯಾಗಿ ಅಡಿಕ್ಟ್ ಆಗಿದ್ದ ಸಮರ್ಥ್ ಎಂಬ ಬಾಲಕನೇ ಈ ಅತಿರೇಕದ ನಿರ್ಧಾರಕ್ಕೆ ಶರಣಾದ ದುರ್ದೈವಿ. ಗೇಮ್ ಅಡಿಕ್ಷನ್: ಸಮರ್ಥ್ ಕಳೆದ ಕೆಲವು ದಿನಗಳಿಂದ ಸತತವಾಗಿ ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್‌ಗಳನ್ನು ಆಡುತ್ತಿದ್ದ. ಗುರುವಾರ ರಾತ್ರಿಯೂ ಗೇಮ್ ಆಡುವುದರಲ್ಲಿ ಮಗ್ನನಾಗಿದ್ದಾಗ ತಾಯಿ ಆತನಿಗೆ ಬುದ್ಧಿವಾದ ಹೇಳಿದ್ದಾರೆ.

*ತಕ್ಷಣದ ನಿರ್ಧಾರ :* “ಮೊಬೈಲ್ ಸಾಕು ಮಾಡಿ ಓದಿಕೊಳ್ಳುವತ್ತ ಗಮನ ಹರಿಸು” ಎಂದು ಹೇಳಿದ ತಾಯಿ ಆತನ ಕೈಲಿದ್ದ ಫೋನ್ ಕಿತ್ತುಕೊಂಡಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಬಾಲಕ, ತಕ್ಷಣ ತನ್ನ ಕೋಣೆಗೆ ಹೋಗಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾನೆ.

*ದೃಶ್ಯ ಕಂಡು ಪೋಷಕರು ಶಾಕ್:* ಸುಮಾರು 15-20 ನಿಮಿಷಗಳಾದರೂ ಮಗ ಹೊರಗೆ ಬಾರದಿದ್ದಾಗ ಆತಂಕಗೊಂಡ ತಂದೆ ಕಿಟಕಿಯಿಂದ ಇಣುಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಬಾಲಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

*ಪೊಲೀಸ್ ಕಮಿಷನರ್ ಸಲಹೆ:*
ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ: ಮಕ್ಕಳು ಅಡಿಕ್ಷನ್‌ಗೆ ಒಳಗಾಗಿದ್ದರೆ ತಕ್ಷಣವೇ ಮೊಬೈಲ್ ಕಿತ್ತುಕೊಳ್ಳುವ ಬದಲು, ನಿಧಾನವಾಗಿ ಅದರಿಂದ ಹೊರಬರುವಂತೆ ಮಾಡಬೇಕು. ವ್ಯಸನ ಹೆಚ್ಚಾಗಿದ್ದರೆ ಶಿಕ್ಷಕರು ಅಥವಾ ಮಕ್ಕಳ ತಜ್ಞರ ಜೊತೆ ಸಮಾಲೋಚನೆ ನಡೆಸಿ. ಮೊಬೈಲ್ ಅನ್ನು ಜ್ಞಾನಾರ್ಜನೆ ಅಥವಾ ಹೊಸ ಕೌಶಲ್ಯ ಕಲಿಯಲು ಬಳಸುವಂತೆ ಪ್ರೇರೇಪಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು