ಇತ್ತೀಚಿನ ಸುದ್ದಿ
ಆಸ್ತಿ ಮಾಲೀಕರಿಗೆ ಸುಳ್ಯ ಪಟ್ಟಣ ಪಂಚಾಯತ್ ಆಡಳಿತ ಸೂಚನೆ
23/02/2025, 23:08

ಸುಳ್ಯ(reporterkarnataka.com): ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಅಧಿಕೃತ ಸ್ವತ್ತುಗಳಿಗೆ ಎ ಖಾತಾ ನಮೂನೆ -3, ಅನಧಿಕೃತ ಸ್ವತ್ತುಗಳಿಗೆ ಖಾತಾ ನಮೂನೆ – 3 ವಹಿಯನ್ನು ನಿರ್ವಹಿಸಬೇಕಾಗಿರುವುದರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲ ಆಸ್ತಿಗಳ ಮಾಲೀಕರುಗಳು ಎ ಖಾತಾ ಸೃಜಿಸಲು ಅರ್ಜಿ, ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ, ಆಸ್ತಿ ಮಾಲಿಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲಿಕತ್ವ ದೃಢೀಕರಿಸುವ ನೋಂದಾಯಿತ ಮಾರಾಟ ಪತ್ರಗಳು/ ದಾನಪತ್ರ/ ವಿಭಾಗಪತ್ರ/ ಸರ್ಕಾರ ಅಥವಾ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ ಮಂಜೂರಾತಿ ಪತ್ರಗಳು/ ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕುಪತ್ರ ದಾಖಲಾತಿಗಳೊಂದಿಗೆ ಸುಳ್ಯ ಪಟ್ಟಣ ಪಂಚಾಯತ್ ಗೆ ಅರ್ಜಿ ಸಲ್ಲಿಸಬಹುದು.
ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ (ಏಕ ನಿವೇಶನ/ ಬಹುನಿವೇಶನ ಮಂಜೂರಾತಿ) ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪ್ರತಿ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಗುರುತಿನ ದಾಖಲೆ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸುಳ್ಯ ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ