6:05 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಆತ್ಮಶಕ್ತಿ ಬಜ್ಪೆ ಶಾಖೆಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

29/03/2026, 18:14

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಬಜ್ಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರುಗಿತು.
ರೋಟರಿ ಕ್ಲಬ್, ಬಜ್ಪೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಬಜ್ಪೆ, ಕರಂಬಾರು, ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಜಂಟಿ ಸಹಯೋಗದೊಂದಿಗೆ ನಡೆದ ಶಿಬಿರವನ್ನು ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ ಸದಸ್ಯರಾದ ಶ್ರೀಮತಿ ಲಿಲ್ಲಿ ಮೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಅವರು, “ಆರೋಗ್ಯದ ರಕ್ಷಣೆ ತುಂಬಾ ಮಹತ್ವದಾಗಿದೆ. ನಾವು ಆರೋಗ್ಯವಾಗಿ ಇದ್ದರೆ ಎಲ್ಲವನ್ನು ಸಂಪಾದಿಸಬಹುದು. ಇಂದಿನ ಆಧುನಿಕ ಯುಗದಲ್ಲಿ ನಿಯಮಿತವಾಗಿ ಆರೋಗ್ಯದ ತಪಾಸಣೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಿ, ಜನರ ಆರೋಗ್ಯದ ಬಗ್ಗೆ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ” ಎಂದರು.
ರೋಟರಿ ಕ್ಲಬ್ ಬಜ್ಪೆಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಶೆಟ್ಟಿ ಅವರು ಮಾತನಾಡಿ, “ ಆರೋಗ್ಯವೇ ಭಾಗ್ಯ, ಆರೋಗ್ಯ ಎಲ್ಲರಿಗೂ ಮುಖ್ಯವಾಗಿ ಬೇಕಾಗಿರುವಂತದ್ದು. ಇಂದಿನ ಯುವ ಜನರಿಗೆ ಬಾಹ್ಯ ಸೌಂದರ್ಯ ಕಾಪಾಡಿಕೊಳ್ಳುವ ಬಗ್ಗೆ ಬಹುವಾದ ಕಾಳಜಿ ಇದೆ. ಆದರೆ ಆರೋಗ್ಯವನ್ನು ಕೆಡಿಸುವ ತಿನಿಸುಗಳ ವಿಚಾರಗಳ ಬಗ್ಗೆ ಜಾಗೃತೆ ಬಹಳ ಕಡಿಮೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೆ ಸೀಮಿತವಾಗಿರದೇ, ಸಂಘದ ಸದಸ್ಯರ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಸಂಘದ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿರಂತರವಾಗಿರಲಿ” ಎಂದು ಶುಭ ಹಾರೈಸಿದರು.
ಬಜ್ಪೆ, ಕರಂಬಾರಿನ
ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಶಿವರಾಮ ಪೂಜಾರಿ ಅವರು ಮಾತನಾಡಿ “ಬಜ್ಪೆಯಲ್ಲಿ ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಿರುವುದು ಈ ಪರಿಸರದ ಜನರಿಗೆ ತುಂಬಾ ಉಪಯುಕ್ತವಾಗಿದೆ” ಎಂದರು.
ಅತ್ತಾವರದ ಕೆಎಂಸಿ ಆಸ್ಪತ್ರೆ ವೈದ್ಯರಾದ ಡಾ. ತಾನಿಯಾ ಗೌಡ ಅವರು ಮಾತನಾಡಿ “ಇವತ್ತಿನ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ-ಮೂಗು, ಗಂಟಲು ತಪಾಸಣೆ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಶಿಬಿರಾರ್ಥಿಗಳು ಇಂತಹ ಶಿಬಿರಗಳಲ್ಲಿ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ವೃದ್ದಿಸಿಕೊಳ್ಳಬಹುದು” ಎಂದರು.
ಮಂಗಳೂರಿನ‌ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ನ ದಂತ ವೈದ್ಯರಾದ ಡಾ. ನವ್ಯಾ ಅವರು ಮಾತನಾಡಿ, “ಈ ವೈದ್ಯಕೀಯ ಶಿಬಿರದಲ್ಲಿ ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿಗೊಳಿಸುವುದು. ಅಲ್ಲದೇ ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದ್ದು, ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 14 ವರ್ಷಗಳಿಂದ ಸಂಘದ ಪ್ರತೀ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಾ ಬರುತ್ತಿದ್ದು, ಈ ವೈದ್ಯಕೀಯ ಶಿಬಿರವು 104ನೇ ಶಿಬಿರವಾಗಿದ್ದು, ತುಂಬಾ ಜನರು ಇದರ ಸದುಪಯೋಗ ಪಡೆಯುತ್ತಿದ್ದಾರೆ. ಆರೋಗ್ಯದ ಬಗ್ಗೆ ಎಲ್ಲರೂ ಹೆಚ್ಚಿನ ಕಾಳಜಿಯನ್ನು ವಹಿಸಿ, ರೋಗ ಬರುವ ಮೊದಲೇ ನಿಯಮಿತ ಆರೋಗ್ಯ ತಪಾಸಣೆ ಮಾಡುವುದು ಉತ್ತಮ. ಉಚಿತ ವೈಧ್ಯಕೀಯ ಶಿಬಿರವನ್ನು ಯಶಸ್ವಿ ಗೊಳಿಸಲು ಕೈ ಜೋಡಿಸಿರುವ ಎಲ್ಲಾ ಸಂಘ ಸಂಸ್ಥೆಗಳಿಗೆ ಕೃತಜ್ಞತೆಯನ್ನು ತಿಳಿಸಿದರು. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು.
ಸಂಘದ 34ನೇ ನೂತನ ಶಾಖೆಯು ಮಂಗಳೂರಿನ ಬೋಳಾರದಲ್ಲಿ ಶುಭಾರಂಭಗೊಂಡಿದ್ದು, ಈ ಪ್ರಯಕ್ತ 100 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 8.50, 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.00 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50, ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ಮುಂದಿನ ತಿಂಗಳಲ್ಲಿ ಸಂಘದ ನೂತನ 35ನೇ ಶಾಖೆಯು ಮೂಡಬಿದ್ರಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಮತ್ತಿತರರು ಉಪಸ್ಧಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ಸ್ವಾಗತಿಸಿ, ಸಿಬ್ಬಂದಿ ಕುಮಾರಿ ಅನುಜಿತ ವಂದಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಜೊತೆ ಕಾರ್ಯದರ್ಶಿ ಶ್ರೀ ವಿಶ್ವನಾಥ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು