4:43 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ

06/04/2026, 16:42

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವದ ಪ್ರಯುಕ್ತ
ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವು ಮಾತೃಶ್ರೀ ಕಾಂಪ್ಲೆಕ್ಸ್ ನಲ್ಲಿರುವ ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು, ಶ್ರೀ ಶಾಸ್ತಾರ ಬಳಗ, ಶ್ರೀ ಶಾಸ್ತಾರ ಮಹಿಳಾ ಮಂಡಳಿ ಮತ್ತು ಭಜಕ ವೃಂದ, ಮಡ್ಯಾರ್ ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ದೇರಳಕಟ್ಟೆಯ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಮುದಾಯ ದಂತ ಆರೋಗ್ಯ ವಿಭಾಗದ ವೈದ್ಯರಾದ ಡಾ.ಇಮ್ರಾನ್ ಪಾಷಾ ಉದ್ಘಾಟಿಸಿ ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ ನೂರಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿ, ಸಮಾಜದ ಎಲ್ಲಾ ಜನರಿಗೆ ಉಚಿತ ಸೇವೆಯನ್ನು ಒದಗಿಸುತ್ತ ಬಂದಿದೆ. ಒಂದೇ ದಿನದಲ್ಲಿ ಮಾಡೂರು ಮತ್ತು ಕಸಿಹಿತ್ಲು, ಜಪ್ಪಿನಮೊಗರುವಿನಲ್ಲಿ ಆಯೋಜಿಸಿದ್ದು ಸಂಘದ ವಿಶೇಷತೆ ಎಂದು ಶ್ಲಾಘಿಸಿದರು. ಜನಸಾಮಾನ್ಯರು ತಮ್ಮ ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಬೇಕು ಮತ್ತು ಶಿಬಿರದಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಿ, ಈ ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡನ್ನು ವಿತರಿಸಲಾಗುವುದು. ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 14 ವರ್ಷಗಳಿಂದ ವೈದ್ಯಕೀಯ ಶಿಬಿರವನ್ನು ನಿರಂತರ ಏರ್ಪಡಿಸುತ್ತಿದ್ದು, ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸಂಘವು 2025-26 ನೇ ಸಾಲಿನಲ್ಲಿ ರೂ. 305 ಕೋಟಿಗೂ ಮಿಕ್ಕಿ ಠೇವಣಿ, ರೂ. 278
ಕೋಟಿಗೂ ಮಿಕ್ಕಿ ಸಾಲ, ಹಾಗೂ ರೂ. 3.5 ಕೋಟಿಗೂ ಮಿಕ್ಕಿ ಲಾಭ ಗಳಿಸಿರುವುದು ಸಂಘದ ಪ್ರಗತಿಗೆ ಕಾರಣವಾಗಿದೆ. ಸಂಘದ 105ನೇ ಉಚಿತ ವೈದ್ಯಕೀಯ ಶಿಬಿರದ ಯಶಸ್ಸಿಗೆ ಸಹಕರಿಸಿದ ಸಂಘ – ಸಂಸ್ಥೆಗಳಿಗೆ ಕೃತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್ ಕೊಂಡಾಣ, ಶ್ರೀ ರಮಾನಾಥ ಸನಿಲ್, ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ಮತ್ತು ಶ್ರೀ ಶಾಸ್ತಾರ ಬಳಗ (ರಿ.) ಶ್ರೀ ಶಾಸ್ತಾರ ಮಹಿಳಾ ಮಂಡಳಿ ಮತ್ತು ಭಜಕ ವೃಂದ, ಮಡ್ಯಾರ್ ಇದರ ಅಧ್ಯಕ್ಷರಾದ ಶ್ರೀ ಸೂರಜ್ ಗಟ್ಟಿ ಕೊಂಡಾಣ, ಶ್ರೀ ಶಾಸ್ತಾರ ಕಟ್ಟೆ ಇದರ ಅರ್ಚಕರಾದ ಶ್ರೀ ಯೋಗೀಶ್ ಪೂಜಾರಿ, ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ (ರಿ.) ಮಾಡೂರು ಇಲ್ಲಿಯ ಗುರುಸ್ವಾಮಿಯಾದ ಶ್ರೀ ಭಾಸ್ಕರ್, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ| ಆಯಿಷಾ ಮತ್ತಿತರರು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಸುಮಾರು 100ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಮಾಡೂರು ಶಾಖೆಯ ಪ್ರಭಾರ ಶಾಖಾಧಿಕಾರಿಯಾದ ಶ್ರೀಮತಿ ಭವ್ಯರವರು ಸ್ವಾಗತಿಸಿ. ಸಂಘದ ಸಿಬ್ಬಂದಿ ಕುಮಾರಿ ರತಿಕ ಅವರು ವಂದಿಸಿದರು. ಸಂಘದ ಉಳ್ಳಾಲ ಶಾಖೆಯ ಹಿರಿಯ ಶಾಖಾಧಿಕಾರಿಯಾದ ಶ್ರೀ ಸಚಿನ್ ಅವರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು