ಇತ್ತೀಚಿನ ಸುದ್ದಿ
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ
21/03/2025, 19:05

ಬೆಂಗಳೂರು (reporterkarnataka.com): ರಾಜ್ಯದಲ್ಲಿ 8,96,447 ವಿದ್ಯಾರ್ಥಿಗಳು ಇಂದು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿಂದು ಮಾತನಾಡಿದ ಮುಖ್ಯಮಂತ್ರಿಗಳು, ಈ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೆ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ತೇರ್ಗಡೆ ಹೊಂದಲಿ ಎಂದು ಶುಭ ಹಾರೈಸಿದರು.