8:44 AM Friday27 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಫೆ.27ರಿಂದ ಮಾ.3 ರವರೆಗೆ ವಿಧಾನ ಸೌಧದಲ್ಲಿ ಪುಸ್ತಕ ಮೇಳ – ಸಾಂಸ್ಕೃತಿಕ ಕಾರ್ಯಕ್ರಮ

25/02/2025, 23:36

ಮಂಗಳೂರು(reporterkarnataka.com): ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಫೆ.27 ರಿಂದ ಮಾ.3 ರವರೆಗೆ
ನಡೆಯಲಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಅವರು ಇಂದು ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಫೆ.27ರಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಸ್ತಕ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್‌ನ ಸ್ಪೀಕರ್ ಬಸವರಾಜ ಶಿವಲಿಂಗಪ್ಪ ಹೊರಟಿ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜ್ಞಾನಪೀಠ ಪುರಸ್ಕೃತರಾದ ಡಾ. ಚಂದ್ರಶೇಖರ್ ಕಂಬಾರ ಹಾಗೂ ದಾಮೋದರ್ ಮೌಜೋ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ವಿಪಕ್ಷ ನಾಯಕ ಆರ್. ಅಶೋಕ್, ಸಚಿವರುಗಳು, ಶಾಸಕರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಮೇಳವು ಸಾರ್ವಜನಿಕರಿಗೆ ಉಚಿತವಾಗಿದ್ದು, ಪುಸ್ತಕ ಹಾಗೂ ಸಾಹಿತಿಗಳು, ಬರಹಗಾರರು, ಕವಿಗಳನ್ನು ವಿಧಾನಸೌಧದೆಡೆಗೆ ಕರೆತರುವ ಕೆಲಸವಾಗುತ್ತಿದ್ದು, ನೂತನವಾಗಿ ಪುಸ್ತಕವನ್ನು ಬಿಡುಗಡೆ ಮಾಡುವವರಿಗೂ ಇಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
ಇಲ್ಲಿ ಪುಸ್ತಕ ಮಳಿಗೆಗಳಿಗೆ ಅವಕಾಶ ನೀಡಿದ್ದು, ಈಗಾಗಲೇ 250ಕ್ಕೂ ಹೆಚ್ಚು ಮಳಿಗೆಗಳಿಗೆ ಬೇಡಿಕೆ ಬಂದಿದ್ದು, 155 ಮಳಿಗೆಗಳಿಗೆ ಅವಕಾಶ ನೀಡಲಾಗುವುದು. ಒಬ್ಬರಿಗೆ ಒಂದು ಮಳಿಗೆ ಮಾತ್ರ ನೀಡಲಾಗುವುದು. ಇದರೊಂದಿಗೆ ಅಕಾಡೆಮಿಗಳಿಗೆ ಒಂದೊಂದು ಹಾಗೂ ಸರ್ಕಾರದ ಪುಸ್ತಕ ಮಳಿಗೆ ಮತ್ತು ನೂತನ ಬರಹಗಾಗರಿಗೆ ಒಟ್ಟಿಗೆ ಒಂದು ಮಳಿಗೆಯನ್ನು ನೀಡಲಾಗುವುದು ಎಂದು ತಿಳಿಸಿದರು.
ಪುಸ್ತಕ ಮೇಳದಲ್ಲಿ 14 ವಿಷಯಗಳ ಕುರಿತು ಸಂವಾದ ನಡೆಯಲಿದ್ದು, ಸಾಹಿತಿಗಳು, ವಿಧ್ವಂಶರು, ಹಿರೀಯ ವಕೀಲರು, ನ್ಯಾಯಾಧೀಶರು, ಪತ್ರಕರ್ತರು ಮೊದಲಾದವರು ಭಾಗವಹಿಸಿ ಸಂವಾದ ನಡೆಸಲಿದ್ದಾರೆ ಎಂದರು.
ಪ್ರತೀದಿನ ಸಂಜೆ 5 ಗಂಟೆಯ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಾ.2ರಂದು ಸಾಧುಕೋಕಿಲಾ ಹಾಗೂ ಅರ್ಜುನ್ ಜನ್ಯ ಅವರಿಂದ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಮಾ.3ರಿಂದ ಅಧಿವೇಶನ ಪ್ರಾರಂಭವಾಗಲಿದ್ದು, ಅಂದು ಪುಸ್ತಕ ಮೇಳ ಮಾತ್ರ ನಡೆಯಲಿದ್ದು, ಅಂದು ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದರು.

ಪ್ರತಿಯೊಬ್ಬ ಶಾಸಕರುಗಳಿಗೂ ತಲಾ 2 ಲಕ್ಷ ರೂ.ಗಳನ್ನು ಪುಸ್ತಕ ಖರೀದಿಗೆ ಅನುದಾನ ನೀಡಿದ್ದು, ಅವರುಗಳ ಕ್ಷೇತ್ರದ ಸರ್ಕಾರಿ ಶಾಲೆ ಅಥವಾ ಕಾಲೇಜುಗಳ ಗ್ರಂಥಾಲಯಕ್ಕೆ ಅಗತ್ಯವಿರುವ ಪುಸ್ತಕಗಳ ಪಟ್ಟಿಯನ್ನು ತರಿಸಿಕೊಂಡು ಶಾಲಾ-ಕಾಲೇಜುಗಳಿಗೆ ವಿತರಿಸಬಹುದು ಎಂದು ಸ್ಪೀಕರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು