9:24 PM Monday2 - November 2026
ಬ್ರೇಕಿಂಗ್ ನ್ಯೂಸ್
ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ

ಇತ್ತೀಚಿನ ಸುದ್ದಿ

ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ: ಸಚಿವ ಈಶ್ವರ ಖಂಡ್ರೆ

18/05/2026, 19:43

ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಅರಣ್ಯ ಸಚಿವರ ಸೂಚನೆ

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ ವೇಳೆ ಮಹಿಳೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯ ಪ್ರತಿಪಾದಿಸಿದ್ದಾರೆ.
ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಚಾರಣಿಗರ/ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸಲಾಗಿದ್ದು, ಈ ಎಸ್.ಓ.ಪಿ. ಜಾರಿ ಖಚಿತಪಡಿಸಿಕೊಳ್ಳುವವರೆಗೆ ಚಾರಣಪಥಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ಪ್ರಕಾರವಾಗಿ ಸಾಕಾನೆ ಶಿಬಿರಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಎಸ್.ಓ.ಪಿ. ರೂಪಿಸಲು ನಿರ್ದೇಶನ ನೀಡಿದ್ದಾರೆ.


ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರದಲ್ಲಿ ನಾಳೆಯಿಂದಲೇ ಪ್ರವಾಸಿಗರು ಆನೆಯ ಬಳಿ ಹೋಗದಂತೆ, ಕನಿಷ್ಠ 100 ಅಡಿ ದೂರದಲ್ಲಿ ನಿಂತು ಆನೆ ಮೈತೊಳೆಯುವುದನ್ನು ವೀಕ್ಷಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಆನೆಗಳ ಬಳಿ ಹೋಗಿ ಸೆಲ್ಫಿ, ಫೋಟೋ ತೆಗೆಸಿಕೊಳ್ಳಲು, ಮೈತೊಳೆಯಲು ಅವಕಾಶ ನೀಡದಂತೆ ಮತ್ತು ಬಾಳೆಹಣ್ಣು, ಬೆಲ್ಲ, ಕಬ್ಬು ಇತ್ಯಾದಿ ಯಾವುದೇ ಆಹಾರವನ್ನು ಪ್ರವಾಸಿಗರ ಕೈಯಿಂದ ತಿನ್ನಸದಂತೆ ಆದೇಶ ಹೊರಡಿಸಲೂ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು