9:25 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

28/04/2023, 21:48

ತುಮಕೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲೇಟಿನಿಂದ ಅವರ ತಲೆಗೆ ಗಾಯಗಳಾಗಿವೆ.
ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಲ್ಲು ತೂರಟ ನಡೆಸಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ ಅವರ ತಲೆಗೆ ಗಾಯವಾಗಿದ್ದು, ಸಮೀಪದ ಅಕ್ಕಿರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಪ್ರಚಾರ ಸಮಯದಲ್ಲಿ ಕಾರ್ಯಕರ್ತರು ಪರಮೇಶ್ವರ ಅವರನ್ನು ಎತ್ತಿಕೊಂಡು ಹೂವು ಸುರಿಯುತ್ತಿದ್ದರು.. ಈ ಸಂದರ್ಭದಲ್ಲಿಯೇ ತೂರಿಬಂದ ಕಲ್ಲು ತಲೆಗೆ ಬಿದ್ದಿದೆ. ತಲೆಯಿಂದ ರಕ್ತ ಸುರಿದಿದ್ದು, ಬಟ್ಟೆಯಿಂದ ತಲೆಯನ್ನು ಒತ್ತಿ ಹಿಡಿದುಕೊಂಡಿದ್ದಾರೆ. ನಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ಹೂವು ಸುರಿಯುವ ಸಂದರ್ಭ ನೋಡಿಕೊಂಡು ದುಷ್ಕರ್ಮಿಗಳು ಕಲ್ಲು ತೂರಿರಬಹುದು ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು