7:41 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಗಡಿ ಭಾಗದಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ, ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ: ಮಂಗಳೂರಿನಲ್ಲಿ ಸಿಎಂ

13/10/2021, 13:57

ಮಂಗಳೂರು(reporterkarnataka.com):     ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಹಾಗೂ ಪ್ರಾಥಮಿಕ ಶಾಲೆ ತೆರೆಯುವ ಕುರಿತು

ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹೇಳಿದರು. 

ಅವರು ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಜತೆ ಮಾತನಾಡಿದರು.

ಕರ್ನಾಟಕಕ್ಕೆ ಹೊಂದಿಕೊಂಡಿರುವ ಕೇರಳ ಮತ್ತು ಮಹಾರಾಷ್ಟ್ರ ದಲ್ಲಿ ಇರುವ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ಮೌಲ್ಯಮಾಪನ ಮಾಡುತ್ತಿದ್ದಾರೆ. ದಸರಾ ಹಬ್ಬದ ಬಳಿಕ ಕೋವಿಡ್ ತಜ್ಞರ ಸಭೆ ಕರೆಯಲಾಗುವುದು. ಗಡಿ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳನ್ನು ಸಡಿಲ‌ ಮಾಡುವ ಕುರಿತು ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಸಂಬಂಧವೂ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು. 2 ವರ್ಷದಿಂದ 18ವರ್ಷಗಳ ವಯೋಮಾನದವರಿಗೆ ಕೋವಿಡ್ ಲಸಿಕೆ ಹಾಕುವ ಕುರಿತು ಪ್ರಯೋಗ ಕೊನೆ ಹಂತದಲ್ಲಿದೆ. ಅದಕ್ಕೆ ಎಲ್ಲ ರೀತಿಯ ಒಪ್ಪಿಗೆ ದೊರೆತ ತಕ್ಷಣ ಮಕ್ಕಳು ಮತ್ತು ಯುವ ವಯಸ್ಕರಿಗೆ  ಲಸಿಕೆ ಹಾಕಲಾಗುವುದು. ಒಟ್ಟಾರೆ ಲಸಿಕೆ ಹಾಕುವುದರಲ್ಲಿ ಕರ್ನಾಟಕ ಮುಂದಿದೆ ಎಂದು ತಿಳಿಸಿದರು.  

ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಪ್ರಕರಣಗಳನ್ನು ದಾಖಲಿಸಿ, ಚಾರ್ಜ್ ಶೀಟ್ ಹಾಕಲಾಗಿರುವ ಬಗ್ಗೆ ಸುದ್ದಿಗಾರರು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ, ಪೊಲೀಸ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಪ್ರಕರಣಗಳನ್ನು  ಹಿಂತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು. 

ಸಮಾಜದಲ್ಲಿ ಜನರ ಭಾವನೆಗಳಿಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗುತ್ತದೆ. ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿ ಕ್ರಿಯೆ-  ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ.   ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡಲು ನಾವೆಲ್ಲರೂ ಪ್ರಯತ್ನ ಪಡಬೇಕು. ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಈ ವಿಷಯದಲ್ಲಿ ಪ್ರತಿಯೊಬ್ಬರದ್ದು ಹೊಣೆಗಾರಿಕೆ ಇದೆ ಎಂದು ಸಿಎಂ ನೈತಿಕ ಪೊಲೀಸ್ ಗಿರಿ ಬಗ್ಗೆ ಪ್ರತಿಕ್ರಿಯಿಸಿದರು.

ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವ ಸುನೀಲ್ ಕುಮಾರ್, ಶಾಸಕರಾದ ಡಾ. ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಕರಾವಳಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ‌ ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ಗಣ್ಯರು, ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು