5:29 AM Saturday9 - November 2024
ಬ್ರೇಕಿಂಗ್ ನ್ಯೂಸ್
ಕೋವಿಡ್‌; ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ ಹಣಗೆರೆಕಟ್ಟೆ ದೇವಸ್ಥಾನದ ಹಣ ಏರುಪೇರು ಆಗಿದ್ದು ಹೇಗೆ!?: ದೇವರ ಹಣದ ಲೆಕ್ಕ ಪಕ್ಕಾ… ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ ವಿಧಾನಸಭೆ ಉಪ ಚುನಾವಣೆ: ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ,… ರೆಡ್ಡಿ ಪಟಾಲಂ ರಾಜಕೀಯವಾಗಿ ಬೆಳೆಯಲು ಅವಕಾಶ ಬೇಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಸೋಲುವ ಭೀತಿ ಎದುರಾಗಿದೆ; 20 ದಿನದೊಳಗೆ ಮುಖ್ಯಮಂತ್ರಿ ರಾಜೀನಾಮೆ: ಸಂಡೂರಿನಲ್ಲಿ… ಲ್ಯಾಂಡ್ ಜಿಹಾದ್: ಕಾಂಗ್ರೆಸ್ ನಿಂದ ಒಂದು ಕೋಮಿನ ತುಷ್ಟಿಕರಣ: ಕೇಂದ್ರ ಸಚಿವ ಪ್ರಹ್ಲಾದ… ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಫ್ಲೈಯಿಂಗ್ ಸ್ಕ್ಯಾಡ್ ಕಾರ್ಯಾಚರಣೆ: ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ಚನ್ನಪಟ್ಟಣ ಉಪ ಚುನಾವಣೆ: ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಪರ ಕುಮಾರಸ್ವಾಮಿ-…

ಇತ್ತೀಚಿನ ಸುದ್ದಿ

ಗಲಭೆಕೋರರ ಬಿಡುವುದಿಲ್ಲ: ರಾಮ ನವಮಿಯ ಹಿಂಸಾಚಾರದ ಬಗ್ಗೆ ಮಧ್ಯಪ್ರದೇಶ ಸಿಎಂ ಚೌಹಾಣ್ ಎಚ್ಚರಿಕೆ

11/04/2022, 19:00

ಭೋಪಾಲ್‌(reporterkarnataka.com): ರಾಮ ನವಮಿ ಆಚರಣೆ ವೇಳೆ ಖಾರ್ಗೋನ್‌ನಲ್ಲಿ

ನಡೆದ ಘಟನೆ ದುರದೃಷ್ಟಕರ. ಗಲಭೆಕೋರರನ್ನು ಬಿಡುವುದಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೀ ಸೋಮವಾರ ಹೇಳಿದ್ದಾರೆ.

ಹಿಂಸಾಚಾರ ನಡೆದು ಒಂದು ದಿನದ ಬಳಿಕ ಪ್ರತಿಕ್ರಿಯಿಸಿದ
ಅವರು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯನ್ನು ಧ್ವಂಸ ಮಾಡಿದರಿಂದಲೇ ನಷ್ಟ ಪಾವತಿಸಲು ಕ್ರಮ ಕೈಗೊಳ್ಳಲಾಗುವುದಿಲ್ಲ.

ನಾವು ‘ಹಕ್ಕು ನ್ಯಾಯಮಂಡಳಿ’ ರಚಿಸುತ್ತಿದ್ದೇವೆ ಎಂದರು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ 77 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಖಾರ್ಗೋನ್‌ನಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ 7 ಮಂದಿ ಪೊಲೀಸ್ ಸಿಬ್ಬಂದಿ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಮನೆಗಳನ್ನು ಗುರಿಯಾಗಿರಿಸಲಾಗಿದೆ. ಜಿಲ್ಲಾಡಳಿತವು ನಂತರ ನಿಷೇಧಾಜ್ಞೆ ಹೇರಿತ್ತು.

ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಚೌಧರಿ ಸೋಮವಾರ ಮಾಧ್ಯಮ ಜತೆ ಮಾತನಾಡಿ, ದುಷ್ಕರ್ಮಿಗಳು ಟೇಸರ್‌ನಿಂದ ಗುಂಡು ಹಾರಿಸಿದ್ದಾರೆ. ಇನ್ನೂ 6 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರೆಲ್ಲರೂ ಸ್ಥಿರರಾಗಿದ್ದಾರೆ. ಒಬ್ಬ ಪೊಲೀಸ್ ಸಿಬ್ಬಂದಿಯ ತಲೆಗೆ ಗಂಭೀರ ಗಾಯವಾಗಿದೆ ಎಂದು ಮಿಶ್ರಾ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದಲ್ಲಿ ನಡೆದ ರಾಮನವಮಿ ಮೆರವಣಿಗೆಯಲ್ಲಿ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ, ಇದರಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಸೋಮವಾರದಂದು ನಿಗದಿಯಾಗಿದ್ದ ಕೆಲವು ಶಾಲಾ ಮತ್ತು ಕಾಲೇಜು ಪರೀಕ್ಷೆಗಳನ್ನು ಮುಂದೂಡಲಾಗಿದೆ. ರಾಮನವಮಿ ಆಚರಣೆಯ ನಡುವೆ ಭಾನುವಾರ ಹಿಂಸಾಚಾರ ವರದಿಯಾದ ನಾಲ್ಕು ರಾಜ್ಯಗಳಲ್ಲಿ ಮಧ್ಯಪ್ರದೇಶವೂ ಒಂದು. ಗುಜರಾತ್, ಬಂಗಾಳ ಮತ್ತು ಜಾರ್ಖಂಡ್ ಕೂಡ ಹಿಂಸಾಚಾರದ ಘಟನೆಗಳು ನಡೆದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು