7:01 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಗಲಭೆಕೋರರ ಬಿಡುವುದಿಲ್ಲ: ರಾಮ ನವಮಿಯ ಹಿಂಸಾಚಾರದ ಬಗ್ಗೆ ಮಧ್ಯಪ್ರದೇಶ ಸಿಎಂ ಚೌಹಾಣ್ ಎಚ್ಚರಿಕೆ

11/04/2022, 19:00

ಭೋಪಾಲ್‌(reporterkarnataka.com): ರಾಮ ನವಮಿ ಆಚರಣೆ ವೇಳೆ ಖಾರ್ಗೋನ್‌ನಲ್ಲಿ

ನಡೆದ ಘಟನೆ ದುರದೃಷ್ಟಕರ. ಗಲಭೆಕೋರರನ್ನು ಬಿಡುವುದಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೀ ಸೋಮವಾರ ಹೇಳಿದ್ದಾರೆ.

ಹಿಂಸಾಚಾರ ನಡೆದು ಒಂದು ದಿನದ ಬಳಿಕ ಪ್ರತಿಕ್ರಿಯಿಸಿದ
ಅವರು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯನ್ನು ಧ್ವಂಸ ಮಾಡಿದರಿಂದಲೇ ನಷ್ಟ ಪಾವತಿಸಲು ಕ್ರಮ ಕೈಗೊಳ್ಳಲಾಗುವುದಿಲ್ಲ.

ನಾವು ‘ಹಕ್ಕು ನ್ಯಾಯಮಂಡಳಿ’ ರಚಿಸುತ್ತಿದ್ದೇವೆ ಎಂದರು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ 77 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಖಾರ್ಗೋನ್‌ನಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ 7 ಮಂದಿ ಪೊಲೀಸ್ ಸಿಬ್ಬಂದಿ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಮನೆಗಳನ್ನು ಗುರಿಯಾಗಿರಿಸಲಾಗಿದೆ. ಜಿಲ್ಲಾಡಳಿತವು ನಂತರ ನಿಷೇಧಾಜ್ಞೆ ಹೇರಿತ್ತು.

ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಚೌಧರಿ ಸೋಮವಾರ ಮಾಧ್ಯಮ ಜತೆ ಮಾತನಾಡಿ, ದುಷ್ಕರ್ಮಿಗಳು ಟೇಸರ್‌ನಿಂದ ಗುಂಡು ಹಾರಿಸಿದ್ದಾರೆ. ಇನ್ನೂ 6 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರೆಲ್ಲರೂ ಸ್ಥಿರರಾಗಿದ್ದಾರೆ. ಒಬ್ಬ ಪೊಲೀಸ್ ಸಿಬ್ಬಂದಿಯ ತಲೆಗೆ ಗಂಭೀರ ಗಾಯವಾಗಿದೆ ಎಂದು ಮಿಶ್ರಾ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದಲ್ಲಿ ನಡೆದ ರಾಮನವಮಿ ಮೆರವಣಿಗೆಯಲ್ಲಿ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ, ಇದರಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಸೋಮವಾರದಂದು ನಿಗದಿಯಾಗಿದ್ದ ಕೆಲವು ಶಾಲಾ ಮತ್ತು ಕಾಲೇಜು ಪರೀಕ್ಷೆಗಳನ್ನು ಮುಂದೂಡಲಾಗಿದೆ. ರಾಮನವಮಿ ಆಚರಣೆಯ ನಡುವೆ ಭಾನುವಾರ ಹಿಂಸಾಚಾರ ವರದಿಯಾದ ನಾಲ್ಕು ರಾಜ್ಯಗಳಲ್ಲಿ ಮಧ್ಯಪ್ರದೇಶವೂ ಒಂದು. ಗುಜರಾತ್, ಬಂಗಾಳ ಮತ್ತು ಜಾರ್ಖಂಡ್ ಕೂಡ ಹಿಂಸಾಚಾರದ ಘಟನೆಗಳು ನಡೆದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು