ಇತ್ತೀಚಿನ ಸುದ್ದಿ
ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ
26/01/2022, 17:51
ಮಂಗಳೂರು(reporterkarnataka.com): ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡ್‌ಗೆ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ‘ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ’ ಬುಧವಾರ ನಡೆಯಿತು.
ನಗರದ ಕಂಕನಾಡಿ ಗರೋಡಿ ಕ್ಷೇತ್ರದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಗೆ ಕ್ಷೇತ್ರದ ಅರ್ಚಕರು ಪೂಜೆ ಸಲ್ಲಿಸುವ ಮೂಲಕ ಸ್ವಾಭಿಮಾನ ನಡಿಗೆಗೆ ಚಾಲನೆ ನೀಡಲಾಯಿತು. ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಉಪಸ್ಥಿತಿಯಲ್ಲಿ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು.
ಜಾಥಾ ಆರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಜನಾರ್ಧನ ಪೂಜಾರಿ ಮಾರ್ಗದರ್ಶನದಲ್ಲಿ ನಡೆಯುವ ಈ ನಡಿಗೆ ಇದು ರಾಜಕೀಯ ಪ್ರೇರಿತವಾದ ಹೋರಾಟ ಅಲ್ಲ ಸ್ವಾಭಿಮಾನದ ನಡಿಗೆ. ಪಕ್ಷ, ಧರ್ಮ, ಜಾತಿ ಬೇಧ ಮರೆತು ಹಳದಿ ಶಾಲಿನ ಗೌರವದೊಂದಿಗೆ ನಡೆಯುತ್ತಿದೆ ಎಂದರು.ಶಾಸಕ ಯು.ಟಿ ಖಾದರ್ ಮತ್ತಿರರು ಭಾಗಿಯಾಗಿದ್ದರು.
ಜಾಥಾದಲ್ಲಿ ಘೋಷಣೆಗಳಿರುವುದಿಲ್ಲ. ಯಾರ ವಿರುದ್ಧವೂ ಧಿಕ್ಕಾರ ಕೂಗಲು ಅವಕಾಶವಿಲ್ಲ. ಭಾಗವಹಿಸುವ ವಾಹನಗಳು ನಾರಾಯಣಗುರುಗಳು ಶಾಂತಿಯ ಸಂಕೇತವಾಗಿ ನೀಡಿರುವ ಹಳದಿ ಪತಾಕೆಯನ್ನು ಹಾಗೂ ಭಾಗವಹಿಸುವ ನಾರಾಯಣ ಗುರುಗಳ ಅನುಯಾಯಿಗಳು ಹಳದಿ ಶಾಲು ಮಾತ್ರ ಧರಿಸಲು ಅವಕಾಶವಿರುತ್ತದೆ ಸಂಘಟಕರು ತಿಳಿಸಿದ್ದಾರೆ.