ಇತ್ತೀಚಿನ ಸುದ್ದಿ
ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನ: ಕಾಂಗ್ರೆಸ್ ನಾಯಕರಿಂದ ಪೂರ್ವ ಸಿದ್ಧತೆಗಳ ಪರಿಶೀಲನೆ
18/12/2024, 14:34
ಬೆಳಗಾವಿ(reporterkarnataka.com): ಇಲ್ಲಿನ ಸಿಪಿಎಡ್ ಮೈದಾನದಲ್ಲಿ ಡಿ. 26 ಮತ್ತು 27ರಂದು ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ನಾಯಕರು
ಸ್ಥಳದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪರಿಶೀಲನೆ ನಡೆಸಿದರು.