1:01 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಗಾಂಧಿ ಭಾರತ ಮರು ನಿರ್ಮಾಣ ಕನ್ನಡ- ಆಂಗ್ಲ ಪುಸ್ತಕ ಬಿಡುಗಡೆ: ಬೃಹತ್ ಗಾಂಧಿ ಪುತ್ಥಳಿ ಅನಾವರಣ

21/01/2025, 20:55

ಬೆಳಗಾವಿ(reporterkarnataka.com): 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಗಾಂಧಿ ಭಾರತ ಮರು ನಿರ್ಮಾಣ” ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.
ಸುವರ್ಣ ಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.


1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು, ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ, ಅಕಾಲಿಗಳಿಗೆ ಅಭಿನಂದನೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು, ಅಸ್ಪೃಶ್ಯತೆ ನಿವಾರಣೆ, ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕಾ ಗಾಂಧಿ,ಕೆ.ಸಿ.ವೇಣುಗೋಪಾಲ,ರಣದೀಪ್‌ಸಿಂಗ್ ಸುರ್ಜೇವಾಲಾ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು