4:15 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !!

14/09/2021, 17:12

ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸಾವನ್ನಪ್ಪಿದೆ. ಇದೀಗ ಅವಿವಾಹಿತ ಯುವತಿಯ ಮಗುವಿನ ತಂದೆ ಯಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಜತೆಗೆ ಒಂದಿಷ್ಟು ಪ್ರೇಮ ಕಹಾನಿ ಹೊರ ಬಿದ್ದಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದ ಯುವತಿ ಅಲ್ಲಿ ಬಸವರಾಜ್ ಎಂಬಾತನೊಂದಿಗೆ ಪ್ರೀತಿ, ಪ್ರೇಮ ಶುರು ಮಾಡಿದ್ದಳು ಎನ್ನಲಾಗಿದೆ. ಇದೇ ವೇಳೆಗೆ ಕೊರೊನಾ ಲಾಕ್ ಡೌನ್ ಆಗಿದ್ದರಿಂದ ಸ್ವಗ್ರಾಮಕ್ಕೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದು ಕೊಂಡು ಬಂದಿದ್ದಳು. ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ, ಲಾಕ್ ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ, ಮನೆಯವರು ಬಸವರಾಜ್ ಬಗ್ಗೆ ಪದೇಪದೆ ಪ್ರಶ್ನೆ ಮಾಡಲಾರಂಭಿಸಿದಾಗ ಬಸವರಾಜ್ ವಾಪಸ್ ಮೈಸೂರಿಗೆ ತೆರಳಿದ್ದ. ಬಸವರಾಜ್ ಮೈಸೂರಿಗೆ ತೆರಳಿದ ಕೆಲ ದಿನಗಳ ಬಳಿಕ ಅಶ್ವಿನಿ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಒಂದು ದಿನ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ಅಂದೇ ಹೊಟ್ಟೆ ನೋವು ಹೆಚ್ಚಾಗಿ ಅವಧಿ ಪೂರ್ವ ಹೆರಿಗೆಯೂ ಆಗಿದೆ. ಮುಂದೆ ನಡೆದಿದ್ದು ದುರಂತ ಅಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು