8:08 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ ರಜೆ ಗೊಂದಲ: ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟ ಮುಖ್ಯಮಂತ್ರಿ

16/09/2023, 15:28

ಮಂಗಳೂರು(reporterkarnataka.com): ಗಣೇಶ ಚತುರ್ಥಿಯ ರಜೆ ಕುರಿತು ಕರಾವಳಿಯ ದಕ್ಷಿಣ ಕನ್ನಡದ ಜನರಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಸ್ವತಃ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಅವರು
ಮುಖ್ಯಮಂತ್ರಿ ಜತೆ ಚರ್ಚಿಸಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಸೂಚನೆ ನೀಡಿದ್ದಾರೆ.
ರಜೆ ಗೊಂದಲ ಕುರಿತು ಖಾದರ್ ಹಾಗೂ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಅವರು ಕೂಡ ಉನ್ನತ ಅಧಿಕಾರಿಗಳ ಜತೆ ಚರ್ಚಿಸಿ
ರಜೆಯ ಅಧಿಕಾರವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಯವರ ವಿವೇಚನಗೆ ಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ರಜೆ ಗೊಂದಲ ಸೃಷ್ಟಿಯಾಗಿದೆ. ಅದು ಕೂಡ ದ.ಕ. ಜಿಲ್ಲೆಯಲ್ಲಿ ಮಾತ್ರ ಈ ಸಮಸ್ಯೆ ಉದ್ಭವಿಸಿದೆ.
ಗಣೇಶ ಹಬ್ಬಕ್ಕೆ ಸೆಪ್ಟೆಂಬರ್ 18ರ ಬದಲು ಸೆಪ್ಟೆಂಬರ್ 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ ಬಹುತೇಕ ಖಚಿತವಾಗಿದೆ. ಇಂದು ಅಥವಾ ನಾಳೆ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು