7:25 PM Monday20 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ…

ಇತ್ತೀಚಿನ ಸುದ್ದಿ

ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಣಪನಿಗೆ ತಿರಂಗ ಅಲಂಕಾರ

03/09/2022, 19:14

ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ದೇಶದ 75ನೇ ಸ್ವಾತಂತ್ರ್ಯೊತ್ಸವ ಸವಿ ನೆನಪಿಗಾಗಿ ಗಣಪತಿ ದೇವರಿಗೆ ತಿರಂಗದ ಅಲಂಕಾರ ಸೇವೆ ಮಾಡಲಾಯಿತು.
ಇದಕ್ಕೆ ಮುನ್ನ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.


ಮಧ್ಯಾಹ್ನ 12.15ಕ್ಕೆ ಸಹಸ್ರ ಮೋದಕ ಹವನ ನಡೆಯಿತು. ಮಧ್ಯಾಹ್ನ 1.30ರಿಂದ ಭಜನಾ ಕಾರ್ಯಕ್ರಮ ಮೇಳೈಸಿತು. 1.45ಕ್ಕೆ ಮಹಾ ನೈವೇದ್ಯ ಹಾಗೂ ಮಧ್ಯಾಹ್ನ 2 ಗಂಟೆಗೆ ಮಹಾಪೂಜೆ ನೆರವೇರಿತು.
ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶೋತ್ಸವ ಆಗಸ್ಟ್ 31ರಂದು ಆರಂಭಗೊಂಡಿದ್ದು, ಸೆ.4ರ ವರೆಗೆ ನಡೆಯಲಿದೆ. ಗಣೇಶೋತ್ಸವ ಅಂಗವಾಗಿ ನಿನ್ನೆ ವಿಶೇಷ ಚೆಂಡೆ ವಾದನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು