12:14 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ

10/09/2021, 07:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು.

ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕೆ ಮಾರ್ಗ ಸೂಚಿಗಳನ್ನು ಮೀರಿ ಸಾಮರಸ್ಯಕ್ಕೆ ಧಕ್ಕೆ ತರುವಂತೆ ವರ್ತಿಸಬೇಡಿ ಎಂದು ಹೇಳಿದರು.  

ತಹಸಿಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಈಗಾಗಲೇ ಮುಂಬಯಿ ಸೇರಿದಂತೆ ಹಲವೆಡೆ ಮೂರನೇ ಆಲೆಯ ಲಕ್ಷ್ಮಣಗಳು ಹೆಚ್ಚಾಗಿವೆ. ಅಥಣಿಯಲ್ಲಿ ಶೇ. 40ರಷ್ಟು ಕೊರೊನಾ ಪ್ರಾಥಮಿಕ ಲಕ್ಷ್ಮಣಗಳಾದ ಕೆಮ್ಮು, ನೆಗಡಿ, ಕಫ ಮುಂತಾದ ಲಕ್ಷ್ಮಣಗಳು ಗೋಚರಿಸುತ್ತಿವೆ. 

ಅಂದು ಗಣಪತಿ ಸ್ಥಾಪನೆ ಮಾಡಿ ಬ್ರೀಟಿಷರನ್ನು ಓಡಿಸಿದಂತೆ ಇಂದು ಕೊರೊನಾ ಓಡಿಸುವ ಅಗತ್ಯವಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ ಎಂದು ಹೇಳಿದರು . ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಢಿ, ತಾಪ ಕಾನಿ ಅಧಿಕಾರಿ ಶೇಖರ ಕರಬಸಪ್ಪಗೋಳ, ಗ್ರೇಡ 2 ತಹಶೀಲ್ದಾರ್ ಮಹಾದೇವ ಬಿರಾದಾರ, ಪಿಎಸ್ ಐ ಕುಮಾರ ಹಾಡಕರ, ಅಪರಾಧ ವಿಬಾಗದ ಪಿಎಸ್ ಐ ರವಿಂದ್ರ ನಾಯಿಕವಾಡಿ ಸೇರಿದಂತೆ ಹಲವಾರು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು