ಇತ್ತೀಚಿನ ಸುದ್ದಿ
ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ
16/03/2025, 20:23

ಸುರತ್ಕಲ್(reporterkarnataka.com):ಕಾಟಿಪಳ್ಳ ಗಣೇಶಪುರದ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಹಾಗೂ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.
ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಚಿತ್ರಾಪುರದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶಾಸಕರು ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿದರು.